ವಿಟ್ಲ ಠಾಣೆ 48 ಗಂಟೆ ಸ್ಥಗಿತ: ಎಸ್ಪಿ ಲಕ್ಷ್ಮೀಪ್ರಸಾದ್‌

ವಿಟ್ಲ ಪಟ್ಟಣ ಪಂಚಾಯತ್‌ ವತಿಯಿಂದ ಠಾಣೆಯನ್ನು ಸ್ಯಾನಿಟೈಸ್‌ ಮಾಡಲಾಗಿದೆ.

ವಿಟ್ಲ ಠಾಣೆಯ ಮೂವರು ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿತ್ತು. ಒಬ್ಬ ಪೊಲೀಸ್ ಕೊರೋನಾ ಸೋಂಕಿತರಾಗಿರುವುದು ಪತ್ತೆಯಾಗಿದೆ.

ಕರಾವಳಿ ಕರ್ನಾಟಕ ವರದಿ
ಬಂಟ್ವಾಳ: ತಾಲೂಕಿನ ವಿಟ್ಲ ಪೊಲೀಸ್ ಠಾಣೆಯ ನಲವತ್ತೆರಡು ವರ್ಷ ವಯಸ್ಸಿನ ಕಾನ್ಸ್ಟೇಬಲ್ ಕೊರೋನಾ ಸೋಂಕಿತರಾದ ಹಿನ್ನೆಲೆಯಲ್ಲಿ ರವಿವಾರದಿಂದ ಎರಡು ದಿನಗಳ ಕಾಲ ಪೊಲೀಸ್‌ ಠಾಣೆ ಮುಚ್ಚಲಾಗಿದೆ. ವಿಟ್ಲ ಪಟ್ಟಣ ಪಂಚಾಯತ್‌ ವತಿಯಿಂದ ಠಾಣೆಯನ್ನು ಸ್ಯಾನಿಟೈಸ್‌ ಮಾಡಲಾಗಿದೆ.

ಸೋಂಕಿತ ಪೇದೆಯ ಪ್ರಾಥಮಿಕ ಸಂಪರ್ಕ ಇರುವವರನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸುವ ಕ್ರಮ ಕೈಗೊಳ್ಳಲಾಗಿದೆ. ಉಳಿದವರನ್ನು ಹೋಂ ಕ್ವಾರಂಟೈನ್ ಮಾಡಲಾಗುವುದು. ಎಲ್ಲ ಪೊಲೀಸರಿಗೆ ಟ್ರಿಪಲ್‌ ಲೇಯರ್‌ ಮಾಸ್ಕ್ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್‌  ತಿಳಿಸಿದ್ದಾರೆ.

ವಿಟ್ಲ ಪೊಲೀಸ್‌ ಠಾಣೆಯಲ್ಲಿ ಒಟ್ಟು 40 ಮಂದಿ ಸಿಬಂದಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮಹಾರಾಷ್ಟ್ರದಿಂದ ಬಂದಿದ್ದ ವ್ಯಕ್ತಿ ಕ್ವಾರಂಟೈನ್‌ಗೆ ಒಳಗಾಗುವ ಮುನ್ನ ಪೊಲೀಸ್ ಠಾಣೆಗೆ ಹೋಗಿದ್ದ. ಈ ವ್ಯಕ್ತಿ ಕ್ವಾರಂಟೈನ್‌ನಲ್ಲಿದ್ದು, ಮೇ.18ರಂದು ಕೊರೋನ ಪೊಸಿಟಿವ್ ಎಂದು ಪರೀಕ್ಷೆಯಿಂದ ದೃಢಪಟ್ಟ ಹಿನ್ನೆಲೆಯಲ್ಲಿ ವಿಟ್ಲ ಠಾಣೆಯ ಮೂವರು ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿತ್ತು. ಒಬ್ಬ ಪೊಲೀಸ್ ಕೊರೋನಾ ಸೋಂಕಿತರಾಗಿರುವುದು ಪತ್ತೆಯಾಗಿದೆ.

 

Get real time updates directly on you device, subscribe now.