ದ.ಕ ಜಿಲ್ಲೆ: ಕೊರೋನ ಸೋಂಕಿಗೆ ಇಬ್ಬರು ಬಲಿ

ದ.ಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ ಹನ್ನೆರಡಕ್ಕೆ ಏರಿದೆ.

ಕರಾವಳಿ ಕರ್ನಾಟಕ ವರದಿ
ಮಂಗಳೂರು: ಕೊರೋನ ಸೋಂಕಿತ ಬಂಟ್ವಾಳ ತಾಲೂಕಿನ ಬಿ.ಕಸ್ಬಾ ಗ್ರಾಮದ ಲೊರೊಟೊಪದವಿನ ಮಹಿಳೆ(58) ಮತ್ತು ಸುರತ್ಕಲ್‌ನ ಓರ್ವ ಯುವಕನ(31) ಸಾವಿನೊಂದಿಗೆ ದ.ಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ ಹನ್ನೆರಡಕ್ಕೆ ಏರಿದೆ.

ಮಹಿಳೆ ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಪ್ರತೀ ತಿಂಗಳಿಗೊಮ್ಮೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೂರು ದಿನದ ಹಿಂದೆ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಮೃತಪಟ್ಟಿದ್ದು, ಗಂಟಲು ದ್ರವ ಪರೀಕ್ಷೆಯಲ್ಲಿ ಕೊರೋನ ಸೋಂಕಿತರಾಗಿರುವುದು ದೃಢಪಟ್ಟಿದೆ.

ಯುವಕ ರಕ್ತದೊತ್ತಡದಿಂದ ಬಳಲುತ್ತಿದ್ದರೆನ್ನಲಾಗಿದೆ.

 

Get real time updates directly on you device, subscribe now.