ಮಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಸೈಕಲ್ ರ್ಯಾಲಿ

ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಜ್ಯೋತಿ ಸರ್ಕಲ್ನಿಂದ ಟೌನ್ ಹಾಲ್ ತನಕ ಬೃಹತ್ ಸೈಕಲ್ ರ್ಯಾಲಿ.

ಕರಾವಳಿ ಕರ್ನಾಟಕ ವರದಿ
ಮಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೈಕಲ್ ರ್ಯಾಲಿ ಹಾಗೂ ಪುರಭವನ ಮುಂಭಾಗ ಪ್ರತಿಭಟನೆ ನಡೆಯಿತು.

ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರ ಮುಖವಾಡ ಧರಿಸಿ ಪ್ರತಿಭಟಿಸಲಾಯಿತು.

ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಪರಿಷತ್ ಮಾಜಿ ಸದಸ್ಯ ಐವನ್ ಡಿ’ಸೋಜಾ, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಶಶಿಧರ್ ಹೆಗ್ಡೆ, ಪ್ರವೀಣ್ ಚಂದ್ರ ಆಳ್ವಾ, ನವೀನ್ ಡಿಸೋಜಾ, ಎ.ಸಿ ವಿನಯ್ ರಾಜ್, ಅನಿಲ್ ಕುಮಾರ್, ಸಂತೋಷ್ ಶೆಟ್ಟಿ, ಸುಹೈಲ್ ಕಂದಕ್, ಟಿ.ಕೆ ಸುಧೀರ್, ಚೇತನ್, ರಮಾನಂದ ಪೂಜಾರಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

Get real time updates directly on you device, subscribe now.