ಪತ್ರಕರ್ತ ರಾಮಕೃಷ್ಣ ಹೇರ್ಳೆ ಅವರ ತಾಯಿ, ನಿವೃತ್ತ ಶಿಕ್ಷಕಿ ರುಕ್ಮಿಣಿ ಹೇರ್ಳೆ ನಿಧನ

35 ವರ್ಷಗಳ ಕಾಲ ಅಸಂಖ್ಯ ವಿದ್ಯಾರ್ಥಿಗಳಿಗೆ ಅವರು ಪಾಠ ಮಾಡಿದ್ದರು.

ಕರಾವಳಿ ಕರ್ನಾಟಕ ವರದಿ
ಕುಂದಾಪುರ: ಪತ್ರಕರ್ತ ರಾಮಕೃಷ್ಣ ಹೇರ್ಳೆ ಅವರ ತಾಯಿ, ಅಪಾರ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಟೀಚರ್, ನಿವೃತ್ತ ಶಿಕ್ಷಕಿ ರುಕ್ಮಿಣಿ ಹೇರ್ಳೆ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಅಲ್ಪಕಾಲದ ಅನಾರೋಗ್ಯದ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ.

ಮಣೂರು, ಮಲ್ಪೆ, ನಾವುಂದ ಮುಂತಾದ ಕಡೆ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ರುಕ್ಮಿಣಿ ಹೇರ್ಳೆ ಕುಂಭಾಶಿಯಲ್ಲಿ ಸೇವೆ ಸಲ್ಲಿಸಿದ ಬಳಿಕ ನಿವೃತ್ತರಾಗಿದ್ದರು. 35 ವರ್ಷಗಳ ಕಾಲ ಅಸಂಖ್ಯ ವಿದ್ಯಾರ್ಥಿಗಳಿಗೆ ಅವರು ಪಾಠ ಮಾಡಿದ್ದರು.

ಮೃತರು ಪತ್ರಕರ್ತ ರಾಮಕೃಷ್ಣ ಹೇರ್ಳೆ ಸೇರಿದಂತೆ ಮೂವರು ಪುತ್ರರು, ಓರ್ವ ಪುತ್ರಿ ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ.

Get real time updates directly on you device, subscribe now.