ಬೆಳ್ತಂಗಡಿ : ರಾಷ್ಟ್ರ ಪ್ರಶಸ್ತಿ ಪಡೆದ ಶಿಕ್ಷಕ ಯಾಕೂಬ್ ರಿಗೆ ಎಸ್.ಐ.ಓ ದಿಂದ ಸನ್ಮಾನ

(ಎಸ್.ಐ.ಓ) ಪಾಣೆಮಂಗಳೂರು ಘಟಕದ ವತಿಯಿಂದ ಅಭಿನಂದಿಸಲಾಯಿತು.

ಯಾಕೂಬ್ ಕೊಯ್ಯೂರ್ ಶಿಕ್ಷಕ ವೃತ್ತಿಯನ್ನು  ಸವಾಲಾಗಿ ಸ್ವೀಕರಿಸಿ ಹಲವಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಮೂಲಕ ಮಾದರಿ.

ಕರಾವಳಿ ಕರ್ನಾಟಕ ವರದಿ
ಬೆಳ್ತಂಗಡಿ: ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್.ಐ.ಓ) ಪಾಣೆಮಂಗಳೂರು ಘಟಕದ ವತಿಯಿಂದ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಯಾಕೂಬ್ ಕೊಯ್ಯೂರ್  ಅವರನ್ನು ಅಭಿನಂದಿಸಲಾಯಿತು.

ಬೆಳ್ತಂಗಡಿ ತಾಲೂಕಿನ ನಡ ಪ್ರೌಢಶಾಲೆಯ ಗಣಿತ ಶಿಕ್ಷಕ ಯಾಕೂಬ್ ಕೊಯ್ಯೂರ್  ರವರು  ಇಲ್ಲಿನ ವಿದ್ಯಾರ್ಥಿಗಳ ಬಾಳಿಗೆ ಆಶಾಕಿರಣವಾಗಿ 1996 ರಿಂದ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಹಳೆಯ ವಿದ್ಯಾರ್ಥಿಗಳ ಸಹಕಾರದಿಂದ ರಾಜ್ಯದ ಪ್ರಪ್ರಥಮ ಗಣಿತ ಪ್ರಯೋಗ ಶಾಲೆಯನ್ನು ನಿರ್ಮಿಸಿ ಮಾದರಿಯಾಗಿದ್ದರು. ಈ ಎಲ್ಲಾ ಸೇವೆಗಾಗಿ ರಾಜ್ಯದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದು, ಇದೀಗ ರಾಷ್ಟ್ರ ಮಟ್ಟದಲ್ಲಿ ಗುರುತಿಸಲ್ಪಡುವ ‘ರಾಷ್ಟ್ರದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇವರು ತಮ್ಮ ಶಿಕ್ಷಕ ವೃತ್ತಿಯನ್ನು  ಸವಾಲಾಗಿ ಸ್ವೀಕರಿಸಿ ಹಲವಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಮೂಲಕ ಮಾದರಿಯಾಗಿದ್ದರು. ಇವರ ಈ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಎಸ್.ಐ.ಓ. ಪಾಣೆಮಂಗಳೂರು ಘಟಕದ ವತಿಯಿಂದ ಅಭಿನಂದಿಸಿ ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಎಸ್.ಐ.ಓ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿಗಳಾದ ರಿಝ್ವಾನ್ ಅಝ್ಹರಿ, ಮುತಹ್ಹರ್ ಬೋಳಂಗಡಿ, ಎಸ್.ಐ.ಓ. ಪಾಣೆಮಂಗಳೂರು ಘಟಕಾಧ್ಯಕ್ಷರಾದ ತಮೀಝ್ ಅಲಿ ಕಾರಾಜೆ, ಕಾರ್ಯದರ್ಶಿ ಮುಬಾರಿಶ್ ಚೆಂಡಾಡಿ ಮತ್ತು ಕ್ಯಾಂಪಸ್ ಕಾರ್ಯದರ್ಶಿ ಸಲ್ವಾನ್ ಬೋಳಂಗಡಿ ಉಪಸ್ಥಿತರಿದ್ದರು

Get real time updates directly on you device, subscribe now.