ಎಸ್ಪಿ ಕಚೇರಿ ಸೀಲ್ ಡೌನ್ ಮಾಡಲಾಗುವುದಿಲ್ಲ: ಎಸ್ಪಿ ವಿಷ್ಣುವರ್ಧನ್

ಶಸ್ತ್ರಾಸ್ತ್ರ ಮೀಸಲು ಪಡೆ ಸಿಬ್ಬಂದಿ ಕಚೇರಿಯ ಹೊರಗಡೆ ಕಾರ್ಯ ನಿರ್ವಹಿಸಿದ ಕಾರಣ ಕಚೇರಿಯ ಒಳಗೆ ಸಂಪರ್ಕ ಹೊಂದಿರಲಿಲ್ಲ.

ಸಾರ್ವಜನಿಕರು ಕಚೇರಿಗಳಿಗೆ ಭೇಟಿ ಕೊಡುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಂತಹಂತವಾಗಿ ಎಸ್ಪಿ ಕಚೇರಿ, ಎಲ್ಲ ಠಾಣೆಗಳ ಸ್ಯಾನಿಟೈಸೇಶನ್

ಕರಾವಳಿ ಕರ್ನಾಟಕ ವರದಿ
ಉಡುಪಿ: ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಶಸ್ತ್ರಾಸ್ತ್ರ ಮೀಸಲು ಪಡೆ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಎಸ್ಪಿ  ಕಚೇರಿ ಸೀಲ್ ಡೌನ್ ಮಾಡಲಾಗುವುದಿಲ್ಲ. ಸಾರ್ವಜನಿಕರು ಪಾಸ್ ಪಡೆಯಲು ಬಂದ ಹಿನ್ನೆಲೆಯಲ್ಲಿ ಎರಡು ದಿನ ಹಿಂದೆ ಕಚೇರಿ ಸ್ಯಾನಿಟೈಸ್ ಮಾಡಲಾಗಿತ್ತು. ಸಿಬಂದಿಗೆ ಸೋಂಕು ಬಂದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸ್ಯಾನಿಟೈಸ್ ಮಾಡಲಾಗುವುದೆಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.

ಶಸ್ತ್ರಾಸ್ತ್ರ ಮೀಸಲು ಪಡೆ ಸಿಬ್ಬಂದಿ ಕಚೇರಿಯ ಹೊರಗಡೆ ಕಾರ್ಯ ನಿರ್ವಹಿಸಿದ ಕಾರಣ ಕಚೇರಿಯ ಒಳಗೆ ಸಂಪರ್ಕ ಹೊಂದಿರಲಿಲ್ಲ. ಆದ್ದರಿಂದ ತೀರಾ ಆತಂಕಕ್ಕೆ ಕಾರಣವಿಲ್ಲ ಎಂದಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸೇರಿದಂತೆ ಎಲ್ಲ ಪೊಲೀಸ್ ಠಾಣೆಗಳನ್ನು ಸ್ಯಾನಿಟೈಸೇಶನ್ ಮಾಡುವ ಉದ್ದೇಶ ಹೊಂದಿರುವುದಾಗಿ ಎಸ್ಪಿ ವಿಷ್ಣುವರ್ಧನ ಅವರು ತಿಳಿಸಿದ್ದಾರೆ. ಸಾರ್ವಜನಿಕರು ಕಚೇರಿಗಳಿಗೆ ಭೇಟಿ ಕೊಡುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಂತಹಂತವಾಗಿ ಇದನ್ನು ಮಾಡುವುದಾಗಿ ಎಸ್ಪಿ ಹೇಳಿದ್ದಾರೆ.

 

Get real time updates directly on you device, subscribe now.