ಉಡುಪಿ: ಕೋವಿಡ್ ಪಾಸಿಟಿವ್ ಸಂಖ್ಯೆಯಲ್ಲಿ ರಾಜ್ಯದಲ್ಲೇ ಅಗ್ರಸ್ಥಾನ

ಬೆಂಗಳೂರು ಹಾಗೂ ಇತರ ಜಿಲ್ಲೆಗಳನ್ನು ಹಿಂದಿಕ್ಕಿ ಪಾಸಿಟಿವ್ ಸಂಖ್ಯೆಯಲ್ಲಿ ಉಡುಪಿ ಅಗ್ರಸ್ಥಾನಕ್ಕೇರಿರುವುದು ಜಿಲ್ಲೆಯ ಜನರಿಗೆ ಚಿಂತೆಯ ವಿಷಯವಾಗಿದೆ.

ಉಡುಪಿ ಜಿಲ್ಲೆಯಲ್ಲಿ ಸೋಂಕಿತರಾದವರಲ್ಲಿ 373ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಉಡುಪಿ: ಜಿಲ್ಲೆಯಲ್ಲಿ ಇಂದು ಒಂದೇ ದಿನ 150ಮಂದಿಯಲ್ಲಿ ಕೊರೋನಾ ಸೋಂಕು ದೃಢ ಪಡುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 410ಕ್ಕೆ ಏರಿದೆ. ಬೆಂಗಳೂರು ಹಾಗೂ ಇತರ ಜಿಲ್ಲೆಗಳನ್ನು ಹಿಂದಿಕ್ಕಿ ಪಾಸಿಟಿವ್ ಸಂಖ್ಯೆಯಲ್ಲಿ ಉಡುಪಿ ಅಗ್ರಸ್ಥಾನಕ್ಕೇರಿರುವುದು ಜಿಲ್ಲೆಯ ಜನರಿಗೆ ಚಿಂತೆಯ ವಿಷಯವಾಗಿದೆ.

ಈ ಮೊದಲು ಕಂದಾಯ ಸಚಿವ ಆರ್. ಅಶೋಕ್ ಅವರು ಉಡುಪಿ ಜಿಲ್ಲೆಯಲ್ಲಿ 210ಮಂದಿ ಇಂದು ಸೋಂಕಿತರಾಗಿದ್ದಾರೆ ಎಂದು ತಿಳಿಸಿದ್ದರು. ಇದೀಗ ಡಿಎಚ್.ಓ ಡಾ.ಸುಧೀರ್ ಚಂದ್ರ ಸೂಡ ನಿಖರ ಮಾಹಿತಿ ನೀಡಿದ್ದಾರೆ.

ಸೋಂಕಿತರು ಮಹಾರಾಷ್ಟ್ರದಿಂದ ಬಂದವರಾಗಿದ್ದು, ಕೊಲ್ಲೂರಿನಲ್ಲಿ ಕ್ವಾರಂಟೈನ್‌ನಲ್ಲಿದ್ದವರು. ಇಂದು ಸೋಂಕಿತರಾದವರಲ್ಲಿ ಒಂಬತ್ತು ಮಕ್ಕಳು, 60ವರ್ಷಕ್ಕಿಂತ ಮೇಲಿನ ಮೂವರು ಹಿರಿಯ ನಾಗರಿಕರು, ಮುವತ್ತೊಂದು ಮಹಿಳೆಯರು ಸೇರಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಸೋಂಕಿತರಾದವರಲ್ಲಿ 373ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ.

Get real time updates directly on you device, subscribe now.