ಉದ್ಯಾವರ: ಡಿಕೆಶಿ ಪ್ರತಿಜ್ಞಾ ಸ್ವೀಕಾರ ಸಮಾರಂಭ ಪ್ರಸಾರ

 ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಕುಮಾರ್, ಮಾಜಿ ಅಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಉಪಸ್ಥಿತರಿದ್ದರು.

ಕರಾವಳಿ ಕರ್ನಾಟಕ ವರದಿ
ಉಡುಪಿ: ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಆಶ್ರಯದಲ್ಲಿ ಜರಗಿದ ಕೆಪಿಸಿಸಿ ನೂತನ ಅಧ್ಯಕ್ಷ  ಡಿ.ಕೆ. ಶಿವಕುಮಾರ್ ಅವರ ಪ್ರತಿಜ್ಞಾ ಸ್ವೀಕಾರ ಸಮಾರಂಭದ ಝೂಮ್ಆ್ಯಪ್ ಪ್ರಸಾರವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು.

ಹಿರಿಯ ಕಾರ್ಯಕರ್ತರಾದ  ಮಾಜಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ  ಸರಳಾ ಎಸ್. ಕೋಟ್ಯಾನ್, ಮಾಜಿ ಪಂಚಾಯತ್ ಸದಸ್ಯ ರಾಬರ್ಟ್ ಫೆರ್ನಾಂಡಿಸ್, ಹಮೀದ್ ಸಾಬ್ಜಾನ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಕುಮಾರ್, ಮಾಜಿ ಅಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ನೂರಕ್ಕೂ ಹೆಚ್ಚು ಕಾರ್ಯಕರ್ತರು ವೀಕ್ಷಿಸಿದರು.

 

 

Get real time updates directly on you device, subscribe now.