ಇಬ್ರಾಹಿಂ ಮನ್ನಾರ್ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಶ್ರದ್ಧಾಂಜಲಿ

ಮನ್ನಾರ್ ಇಬ್ರಾಹಿ  ಅವರು ಇಂದು ನಮ್ಮನ್ನಗಲಿರುವುದು ಅತೀವ ದುಃಖವಾಗಿದೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕರಾದ ಯು.ಆರ್. ಸಭಾಪತಿ ಸಂತಾಪ.

ಕರಾವಳಿ ಕರ್ನಾಟಕ ವರದಿ
ಉಡುಪಿ:  ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರೂ, ಕಾಪು ಮಾರುಕಟ್ಟೆ ವರ್ತಕರ ಸಂಘದ ಅಧ್ಯಕ್ಷರೂ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಸಾರಿಗೆ ಉದ್ಯಮಿ ಮನ್ನಾರ್ ಇಬ್ರಾಹಿಂ(59) ಅವರ ನಿಧನಕ್ಕೆ ಕಾಂಗ್ರೆಸ್ ಪಕ್ಷ ತೀವೃ ಶೋಕ ವ್ಯಕ್ತಪಡಿಸಿದೆ.

ಮನ್ನಾರ್ ಇಬ್ರಾಹಿಂ ಅವರು ಇಂದು(ಆ.5) ನಮ್ಮನ್ನಗಲಿರುವುದು ಅತೀವ ದುಃಖವಾಗಿದೆ. ಪಕ್ಷಕ್ಕಾಗಿ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿಕೊಳ್ಳುತ್ತಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ಅಗಲಿಕೆಯ ದುಃಖ ಬರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕರಾದ ಯು.ಆರ್. ಸಭಾಪತಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ.

Get real time updates directly on you device, subscribe now.