ಕೋಟ: ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಿಗೆ ಸನ್ಮಾನ

ವಿವೇಕ ಪದವಿಪೂರ್ವ ಕಾಲೇಜಿನ ಹೈಸ್ಕೂಲ್ ವಿಭಾಗದ ಕನ್ನಡ ಅಧ್ಯಾಪಕರಾದ ಪ್ರೇಮಾನಂದ.

ಕೋಟ ವಿದ್ಯಾಸಂಘ ಮತ್ತು ವಿವೇಕ ವಿದ್ಯಾಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಸಂಮ್ಮಾನಿಸಲಾಯಿತು.

ಕರಾವಳಿ ಕರ್ನಾಟಕ ವರದಿ/ಸೀತಾರಾಮ ಮಯ್ಯ
ಕೋಟ:
ಶಿಕ್ಷಣ ಇಲಾಖೆಯಿಂದ ನೀಡಲ್ಪಡುವ ವರ್ಷದ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಗಳಿಸಿದ ವಿವೇಕ ಪದವಿಪೂರ್ವ ಕಾಲೇಜಿನ ಹೈಸ್ಕೂಲ್ ವಿಭಾಗದ ಕನ್ನಡ ಅಧ್ಯಾಪಕರಾದ ಪ್ರೇಮಾನಂದ ಇವರನ್ನು ಕೋಟ ವಿದ್ಯಾಸಂಘ ಮತ್ತು ವಿವೇಕ ವಿದ್ಯಾಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಸಂಮ್ಮಾನಿಸಲಾಯಿತು.

ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ವಿದ್ಯಾಸಂಘದ ಜೊತೆ ಕಾರ್ಯದರ್ಶಿ ಎಂ.ರಾಮದೇವ ಐತಾಳ ವಹಿಸಿದ್ದರು. ಶಿಕ್ಷಕರು ತಮ್ಮ ವೃತ್ತಿಯಲ್ಲಿ ಸೇವಾ ಮನೋಭಾವ, ಅದಮ್ಯ ಉತ್ಸಾಹ, ಕರ್ತವ್ಯ ನಿಷ್ಠೆ ಮತ್ತು ಬದ್ಧತೆಗಳೊಂದಿಗೆ ವಿದ್ಯಾರ್ಥಿಗಳಿಗೆ ಪ್ರೀತಿಯಿಂದ ಬೋಧಿಸಬೇಕು. ಜೊತೆಯಲ್ಲಿ ವೃತ್ತಿಯಲ್ಲಿ ಪ್ರೀತಿ, ಸಾಮಾಜಿಕ ಬದ್ಧತೆಯನ್ನು ಬೆಳೆಸಿಕೊಂಡು ಜವಾಬ್ದಾರಿಯಿಂದ ಮುನ್ನಡೆಯಬೇಕು. ಆಗ ನಿಜವಾಗಿಯೂ ಸಮರ್ಥರಿಗೆ, ಯೋಗ್ಯರಿಗೆ ಒಳ್ಳೆಯ ಪ್ರಶಸ್ತಿ ಲಭಿಸುತ್ತದೆ ಎಂದು ಅವರು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ ನಾವಡ ಪ್ರಾಸ್ತಾವಿಕ ನುಡಿಯೊಂದಿಗೆ ಸ್ವಾಗತಿಸಿದರು. ಹೈಸ್ಕೂಲ್ ವಿಭಾಗದ ಮುಖ್ಯಸ್ಥ ವೆಂಕಟೇಶ ಉಡುಪ ಪ್ರಶಸ್ತಿ ವಿಜೇತರ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು. ಮುಖ್ಯೋಪಾಧ್ಯಾಯ ಶ್ರೀಪತಿ ಹೇರ್ಳೆ ಶುಭ ಹಾರೈಸಿದರು.

ಅಧ್ಯಾಪಕ ನಾರಾಯಣಮೂರ್ತಿ ಉಡುಪ ಪ್ರಾರ್ಥಿಸಿದರು. ಸನ್ಮಾನ ಸ್ವೀಕರಿಸಿದ ಪ್ರೇಮಾನಂದ ಅವರು ಪ್ರಶಸ್ತಿ ಸಂದ ಕುರಿತಾಗಿ ಕೃತಜ್ಞತೆ ಸಲ್ಲಿಸಿದರು.

ಮುಖ್ಯೋಪಾಧ್ಯಾಯ ಕೆ. ಜಗದೀಶ ಹೊಳ್ಳ ಧನ್ಯವಾದವನ್ನಿತ್ತರು. ಮಂಜುನಾಥ ಉಪಾಧ್ಯ ಕಾರ್ಯಕ್ರಮ ನಿರ್ವಹಿಸಿದರು.

Get real time updates directly on you device, subscribe now.