ಎಸ್ ಎಸ್ ಎಲ್ ಸಿ ಪರೀಕ್ಷೆ ವೇಳಾಪಟ್ಟಿ ಸೋಮವಾರ ಅಂತಿಮ: ಸುರೇಶ್ ಕುಮಾರ್

ಜೂನ್ ತಿಂಗಳ ಎರಡನೇ ಅಥವಾ ಮೂರನೇ ವಾರದಲ್ಲಿ ಪರೀಕ್ಷೆ ನಡೆಸಲು ಚಿಂತನೆ ನಡೆದಿದೆ.

ಮಕ್ಕಳ ಹಿತ ಗಮನದಲ್ಲಿಟ್ಟುಕೊಂಡು ಎಲ್ಲ ಅಂಶಗಳ ಬಗ್ಗೆ ಚರ್ಚಿಸಿ ಸೋಮವಾರ ಪರೀಕ್ಷೆ ವೇಳಾಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಸುರೇಶ್ ಕುಮಾರ್ ಹೇಳಿದರು.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಕೊರೋನಾ ಲಾಕ್ ಡೌನ್ ಕಾರಣ ಮುಂದೂಡಲಾಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ವೇಳಾಪಟ್ಟಿಯನ್ನು ಸೋಮವಾರ  ಅಂತಿಮಗೊಳಿಸಿ  ಬಿಡುಗಡೆ ಮಾಡಲಾಗುವುದೆಂದು  ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸೋಮವಾರ ಈ ಬಗ್ಗೆ ಚರ್ಚೆ ನಡೆಯಲಿದ್ದು, ಪರೀಕ್ಷೆ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ಜೂನ್ ತಿಂಗಳ ಎರಡನೇ ಅಥವಾ ಮೂರನೇ ವಾರದಲ್ಲಿ ಪರೀಕ್ಷೆ ನಡೆಸಲು ಚಿಂತನೆ ನಡೆದಿದೆ. ಈಗ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಪುನರ್ಮನನ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದು ಜೂನ್ ಮೊದಲ ವಾರದಲ್ಲಿ ಮುಗಿದ ಬಳಿಕ ಪರೀಕ್ಷೆ ನಡೆಸಲು ಚಿಂತನೆ ನಡೆದಿದೆ ಎಂದು ಸುರೇಶ್ ಕುಮಾರ್ ಹೇಳಿದರು. ವಿದ್ಯಾರ್ಥಿಗಳಿಗೆ ಮನೆ ಪಕ್ಕದಲ್ಲೇ ಇರುವ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬ್ಬರೆಯುವ ವ್ಯವಸ್ಥೆ ಕಲ್ಪಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಮಕ್ಕಳ ಹಿತ ಗಮನದಲ್ಲಿಟ್ಟುಕೊಂಡು ಎಲ್ಲ ಅಂಶಗಳ ಬಗ್ಗೆ ಚರ್ಚಿಸಿ ಸೋಮವಾರ ಪರೀಕ್ಷೆ ವೇಳಾಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದರು.

ಎಪ್ರಿಲ್ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆ ಮುಂದೂಡಲ್ಪಟ್ಟಿತ್ತು.

 

Get real time updates directly on you device, subscribe now.