ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ ಸಾಧ್ಯತೆ

ಜೂನ್ ಮೊದಲ ವಾರ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದ್ದು, ಅಲ್ಲಿಯ ತನಕ ಮುಂಗಾರು ಪೂರ್ವ ಮಳೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯ್ದ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಮೇ.26ರಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಚಿಕ್ಕಮಗಳೂರು, ಹಾಸನದಲ್ಲಿ ಹೆಚ್ಚು ಮಳೆಯಾಗಲಿದ್ದು, ‘ಯಲ್ಲೊ ಅಲರ್ಟ್’ ಘೋಷಿಸಲಾಗಿದೆ. ಮೇ.27ರಂದು ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೇ.28ರಂದು ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಜೂನ್ ಮೊದಲ ವಾರ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದ್ದು, ಅಲ್ಲಿಯ ತನಕ ಮುಂಗಾರು ಪೂರ್ವ ಮಳೆ ಸುರಿಯಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ. ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

 

Get real time updates directly on you device, subscribe now.