ಕಾಂಗ್ರೆಸ್ ವಕ್ತಾರೆಯ ಮಗಳಿಗೆ ರೇಪ್ ಬೆದರಿಕೆ. ಗುಜರಾತ್‌ನಲ್ಲಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸ್

ಕಾಂಗ್ರೆಸ್ ವಕ್ತಾರೆ ಪ್ರಿಯಾಂಕ ಚತುರ್ವೇದಿ ಮಗಳಿಗೆ ಟ್ವಿಟ್ಟರ್‌ನಲ್ಲಿ ಅತ್ಯಾಚಾರ ಬೆದರಿಕೆ ಹಾಕಿದ್ದ 36 ವರ್ಷದ ವ್ಯಕ್ತಿಯೊಬ್ಬನನ್ನು ಮುಂಬೈ ಪೋಲೀಸರು ಗುಜರಾತಿನಲ್ಲಿ ಬಂಧಿಸಿದ್ದಾರೆ.

ಮುಂಬೈ: ಕಾಂಗ್ರೆಸ್ ವಕ್ತಾರೆ ಪ್ರಿಯಾಂಕ ಚತುರ್ವೇದಿ ಮಗಳಿಗೆ ಟ್ವಿಟ್ಟರ್‌ನಲ್ಲಿ ಅತ್ಯಾಚಾರ ಬೆದರಿಕೆ ಹಾಕಿದ್ದ 36 ವರ್ಷದ ವ್ಯಕ್ತಿಯೊಬ್ಬನನ್ನು ಮುಂಬೈ ಪೋಲೀಸರು ಗುಜರಾತಿನಲ್ಲಿ ಬಂಧಿಸಿದ್ದಾರೆ.

ಅಹಮದಾಬಾದ್ ಸಮೀಪದ ಬವಲಾ ಎನ್ನುವಲ್ಲಿ ಗಿರೀಶ್ ಮಹೇಶ್ವರಿ ಎನ್ನುವವನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೋಲೀಸ್ ಅಧಿಕಾರಿ ತಿಳಿಸಿದ್ದಾರೆ. ಆರೋಪಿಯನ್ನು ಮುಂಬೈಗೆ ಕರೆತರಲಾಗಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

ಶ್ರೀರಾಮನ ಚಿತ್ರವನ್ನು ಡಿ.ಪಿಯಲ್ಲಿ ಹಾಕಿಕೊಂಡಿದ್ದ ಗಿರೀಶ್ ಮಹೇಶ್ವರಿ ಕಾಂಗ್ರೆಸ್ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ಅವರ ಹತ್ತರ ಪ್ರಾಯದ ಪುತ್ರಿಗೆ ರೇಪ್ ಮಾಡುವುದಾಗಿ ಬೆದರಿಕೆ ಹಾಕಿದ್ದು ದೇಶದಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ಚತುರ್ವೇದಿ ಅವರ ಹತ್ತು ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸುವ ಬೆದರಿಕೆ ಹಾಕಿದ್ದ ಆರೋಪಿ ಗಿರೀಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾಗಿ ಪೋಲೀಸರು ಹೇಳಿದ್ದಾರೆ.

ಮಧ್ಯ ಪ್ರದೇಶದಲ್ಲಿ ನಡೆದ ಏಳು ವರ್ಷದ ಬಾಲಕಿ ಮೇಲಿನ ಅತ್ಯಾಚಾರದ ಘಟನೆ ಬಳಿಕ ಚತುರ್ವೇದಿ ಟ್ವಿಟ್ಟರ್ ಅಕೌಂಟ್‌ಕೆಲ ಬೆದರಿಕೆ ಸಂದೇಶಗಳೂ ಬರುತ್ತಿದೆ ಎಂದು ಅವರು ಆರೋಪಿಸಿದ್ದರು.

ಆರೋಪಿ ಗಿರೀಶ್ ಬಂಧನದ ಹಿನ್ನೆಲೆಯಲ್ಲಿ ಟ್ವಿಟ್ ಮಾಡಿರುವ ಪ್ರಿಯಾಂಕ ಚತುರ್ವೇದಿ ಗೃಹ ಸಚಿವ ರಾಜ್ ನಾಥ್ ಸಿಂಗ್ ಸೇರಿದಂತೆ ಹಿರಿಯ ಪೋಲೀಸ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Get real time updates directly on you device, subscribe now.