ಕೊರೋನಾ ನಿಯಂತ್ರಣಕ್ಕಾಗಿ ಬೆಂಗಳುರು ಸೇರಿದಂತೆ ನಾಲ್ಕು ಜಿಲ್ಲೆಗಳು ರೆಡ್ ಝೋನ್!

ಕೊರೋನಾ ನಿಯಂತ್ರಣಕ್ಕೆ ತಡೆಯುವ ಸಲುವಾಗಿ ರಾಜ್ಯ ಸರ್ಕಾರ ಇದೀಗ ರಾಜ್ಯದ ನಾಲ್ಕು ಜಿಲ್ಲೆಗಳನ್ನು ರೆಡ್ ಝೋನ್ ಎಂದು ಘೋಷಣೆ ಮಾಡಿದೆ.

ಬೆಂಗಳೂರು: ಕೊರೋನಾ ನಿಯಂತ್ರಣಕ್ಕೆ ತಡೆಯುವ ಸಲುವಾಗಿ ರಾಜ್ಯ ಸರ್ಕಾರ ಇದೀಗ ರಾಜ್ಯದ ನಾಲ್ಕು ಜಿಲ್ಲೆಗಳನ್ನು ರೆಡ್ ಝೋನ್ ಎಂದು ಘೋಷಣೆ ಮಾಡಿದೆ.

ಮೈಸೂರು, ಉತ್ತರ ಕನ್ನಡ, ಬೆಂಗಳೂರು, ದಕ್ಷಿಣ ಕನ್ನಡ ಹಾಗೂ ಚಿಕ್ಕಬಳ್ಳಾಪುರಗಳನ್ನು ರಾಜ್ಯ ಸರ್ಕಾರ ರೆಡ್ ಝೋನ್ ಎಂದು ಘೋಷಣೆ ಮಾಡಿದೆ.

ರೆಡ್ ಝೋನ್ ಘೋಷಣೆಯಾಗಿರುವ ನಗರ ಹಾಗ ಜಿಲ್ಲೆಗಳ ಮೇಲೆ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಮನೆಗಳ ಬಾಗಿಲಿಗೆ ತೆರಳಿ ಕೊರೋನಾ ಜಾಗೃತಿ ಮೂಡಿಸುವುದಷ್ಟೇ ಅಲ್ಲ, ಕ್ವಾರಂಟೈನ್ ನಲ್ಲಿರುವ ಜನರ ಸಂಪರ್ಕದಲ್ಲಿರುವವರ ಮೇಲೂ ಹೆಚ್ಚಿನ ನಿಗಾ ವಹಿಸಲಾಗುತ್ತದೆ. ಈ ಜಿಲ್ಲೆಗಳಲ್ಲಿ ಘೋಷಣೆ ಮಾಡಲಾಗಿರುವ ಲಾಕ್’ಡೌನ್ ಕ್ರಮವನ್ನು ಮತ್ತಷ್ಟು ಬಿಗಿಗೊಳಿಸಲಾಗುತ್ತದೆ.

ಈಗಾಗಲೇ ರಾಜ್ಯ ಸರ್ಕಾರ ಬೆಂಗಳೂರು ಸೇರಿ ನಾಲ್ಕು ಜಿಲ್ಲೆಗಳಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಬೆಂಗಳೂರು ನಗರದಲ್ಲಿ 2 ಮಿಲಿಯನ್ ರಷ್ಟು ಜನಸಂಖ್ಯೆಯಿದ್ದು, ಐಟಿ ಕ್ಷೇತ್ರದಲ್ಲಿರುವ ಜನರು ಹೆಚ್ಚಾಗಿ ವಾಸಿಸುತ್ತಿದ್ದಾರೆ. ಹೀಗಾಗಿ ಇಲ್ಲಿ ಹೆಚ್ಚಿನ ಕಾಳಜಿ ವಹಿಸುವ ಅಗತ್ಯವಿದೆ. ಮುಂದಿನ ಎರಡು ವಾರಗಳಲ್ಲಿ ಈ ಕ್ರಮ ಮತ್ತಷ್ಟು ಬಿಗಿಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರು ಹೇಳಿದ್ದಾರೆ.

Get real time updates directly on you device, subscribe now.