“ವಿನ್ನಿಯಮ್ಮ” ಎಂದೇ ಖ್ಯಾತರಾಗಿದ್ದ ಮಾಜಿ ಶಾಸಕಿ ವಿನ್ನಿಫ್ರೆಡ್ ಫೆರ್ನಾಂಡಿಸ್ ಇನ್ನಿಲ್ಲ

ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ, ಹಿರಿಯ ರಾಜಕಾರಣಿ ವಿನ್ನಿಫ್ರೆಡ್ ಫೆರ್ನಾಂಡಿಸ್ ನಿಧನರಾಗಿದ್ದಾರೆ.

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ, ಹಿರಿಯ ರಾಜಕಾರಣಿ ವಿನ್ನಿಫ್ರೆಡ್ ಫೆರ್ನಾಂಡಿಸ್ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವೃದ್ಧಾಪ್ಯ ಸಂಬಂಧಿ ಕಾಯಿಲೆಗಳಿಂದ ಕಳೆದ ಕೆಲ ಕಾಲದಿಮ್ದ ಅನಾರೋಗ್ಯ ಪೀಡಿತರಾಗಿದ್ದ ಅವರು ಇಂದು ನಿಧನರಾಗಿದ್ದಾರೆ.

ದಿಟ್ಟ ನಿಲುವಿನ ಗಟ್ಟಿ ದನಿಯ ರಾಜಕಾರಣಿ ಎಂದೇ ಹೆಸರಾಗಿದ್ದ ವಿನ್ನಿಫ್ರೆಡ್ ಫೆರ್ನಾಂಡಿಸ್ ಎರಡು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಕುಂದಾಪುರ ಪುರಸಭೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಒಂದು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿಯೂ ಅವರು ಆಯ್ಕೆಯಾಗಿದ್ದರು.

ತಮ್ಮ ಓರಗೆಯ ಕಾಂಗ್ರೆಸ್ ಮತ್ತು ಇತರ ಪಕ್ಷಗಳ ನಾಯಕರ ಜೊತೆ ನಿಕಟ ಸಂಪರ್ಕ ಹೊಂದಿದ್ದ ವಿನ್ನಿಫ್ರೆಡ್ ಫೆರ್ನಾಂಡಿಸ್ ಅಂದಿನ ಕಾಲದ ,ಪ್ರಭಾವಿ ನಾಯಕಿಯಾಗಿದ್ದರು. ಕುಂದಾಪುರ ಪರಿಸರದಲ್ಲಿ ವಿನ್ನಿಯಮ್ಮ ಎಂದೇ ಚಿರಪರಿಚಿತರು.

ವಿನ್ನಿಫ್ರೆಡ್ ಫೆರ್ನಾಂಡಿಸ್ ಮೂವರು ಪುತ್ರರು, ಮೂವರು ಪುತ್ರಿಯರು ಮತ್ತು ಅಭಿಮಾನಿಗಲನ್ನು ಅಗಲಿದ್ದಾರೆ.

Get real time updates directly on you device, subscribe now.