ಭೂಗತ ಲೋಕದ ಪಾತಕಿ, ಮಾಜಿ ಡಾನ್ ಮುತ್ತಪ್ಪ ರೈ ನಿಧನ

ಭೂಗತ ಲೋಕದ ಪಾತಕಿ, ಮಾಜಿ ಡಾನ್ ಮುತ್ತಪ್ಪ ರೈ (68) ಶುಕ್ರವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಬೆಂಗಳೂರು: ಭೂಗತ ಲೋಕದ ಪಾತಕಿ, ಮಾಜಿ ಡಾನ್ ಮುತ್ತಪ್ಪ ರೈ (68) ಶುಕ್ರವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಕಳೆದ ಎರಡು ವರ್ಷದಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಮುತ್ತಪ್ಪ ರೈ ಒಂದು ವಾರದ ಹಿಂದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇಂದು ಸಂಜೆ 4 ಗಂಟೆಗೆ ರಾಮನಗರ ತಾಲೂಕಿನ ಬಿಡದಿಯಲ್ಲಿ ಮುತ್ತಪ್ಪ ರೈ ಅವರ ಅಂತ್ಯಕ್ರಿಯೆ ನಡೆಯಲಿದೆ. ಕೊರೊನಾ ಭೀತಿ ಇರುವ ಹಿನ್ನೆಲೆ ಕೇವಲ ಕುಟುಂಬಸ್ಥರಿಗೆ ಮಾತ್ರ ಅಂತ್ಯಕ್ರಿಯೆ ಭಾಗಿಯಾಗಲು ಅವಕಾಶ ನೀಡಲಾಗಿದೆ.

Get real time updates directly on you device, subscribe now.