ಕ್ವಾರಂಟೈನ್‌ನಲ್ಲಿದ್ದ ಕುಂದಾಪುರ ಮೂಲದ ವ್ಯಕ್ತಿ ನಿಧನ

ವ್ಯಕ್ತಿಯು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಕರಾವಳಿ ಕರ್ನಾಟಕ ವರದಿ
ಉಡುಪಿ: ಮಹಾರಾಷ್ಟ್ರದಿಂದ ಕುಂದಾಪುರ ತಾಲೂಕಿಗೆ ಬಂದಿದ್ದ ವ್ಯಕ್ತಿಯೋರ್ವರು ಎರಡು ದಿನ ಹಿಂದೆ ಮಣಿಪಾಲ ಕೆ.ಎಂಸಿಯಲ್ಲಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಅಸ್ವಸ್ಥರಾದ ಬಳಿಕ ಅವರನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.

ವ್ಯಕ್ತಿಯು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ವ್ಯಕ್ತಿಗೆ ಕೊರೋನಾ ಸೋಂಕು ಇತ್ತೆ ಎಂಬ ಶಂಕೆ ಹಿನ್ನೆಲೆಯಲ್ಲಿ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಮೇ ತಿಂಗಳ ಆರಂಭದಲ್ಲಿ ವ್ಯಕ್ತಿ ಮಹಾರಾಷ್ಟ್ರದಿಂದ ಬಂದಿದ್ದರು ಎನ್ನಲಾಗಿದೆ.

Get real time updates directly on you device, subscribe now.