ನೇತ್ರಾವತಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ಯುವಕ ನಾಪತ್ತೆ, ಆತ್ಮಹತ್ಯೆ ಶಂಕೆ

ಇಂದು ಬೆಳಿಗ್ಗೆ ನದಿಗೆ ಜಿಗಿದಿರಬಹುದೆಂಬ ಶಂಕೆ ಸ್ಥಳೀಯವಾಗಿ ವ್ಯಕ್ತವಾಗಿದೆ.

ಕರಾವಳಿ ಕರ್ನಾಟಕ ವರದಿ
ಮಂಗಳೂರು: ನೇತ್ರಾವತಿ ಸೇತುವೆ ಬಲಿ ಬೈಕ್ ನಿಲ್ಲಿಸಿ ನಾಪತ್ತೆಯಾದ ಯುವಕ ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದ್ದು, ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಕುರ್ನಾಡು ನಿವಾಸಿ ಪ್ರವೀಣ ಸಫಲ್ಯ್(28) ಎಂಬವರ ಬೈಕ್ ಸ್ಥಳದಲ್ಲಿ ಪತ್ತೆಯಾಗಿದ್ದು, ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ.

ಬೈಕ್ ವಶಕ್ಕೆ ಪಡೆದ ಪೊಲೀಸರು ಮನೆಯವರಿಗೆ ಮಾಹಿತಿ ನೀಡಿದಾಗ ಮಂಗಳವಾರ ರಾತ್ರಿ ಕೆಲಸಕ್ಕೆ ಹೋದ ಪ್ರವೀಣ್ ಮನೆಗೆ ಬಂದಿರಲಿಲ್ಲ ಎಂದು ತಿಳಿದುಬಂದಿದೆ.

ಪ್ರವೀಣ್ ಇಂದು ಬೆಳಿಗ್ಗೆ ನದಿಗೆ ಜಿಗಿದಿರಬಹುದೆಂಬ ಶಂಕೆ ಸ್ಥಳೀಯವಾಗಿ ವ್ಯಕ್ತವಾಗಿದೆ. ಎಸ್.ಎಲ್.ಆರ್ ಸಂಸ್ಥೆ ಉದ್ಯೋಗಿಯಾಗಿದ್ದರು.

Get real time updates directly on you device, subscribe now.