ನೇತ್ರಾವತಿ ಸೇತುವೆಯಲ್ಲಿ ಬೈಕ್ ಪತ್ತೆ ಪ್ರಕರಣ: ಯುವಕ ಶಿವಮೊಗ್ಗದಲ್ಲಿ ಪತ್ತೆ

ಯುವಕ ಶಿವಮೊಗ್ಗದಲ್ಲಿ ಪತ್ತೆಯಾಗುವುದರೊಂದಿಗೆ ಪ್ರಕರಣ ತಿರುವು ಪಡೆದಿದೆ.

ಕರಾವಳಿ ಕರ್ನಾಟಕ ವರದಿ
ಮಂಗಳೂರು: ನೇತ್ರಾವತಿ ಸೇತುವೆ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾದ ಯುವಕ ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದ್ದ ಪ್ರಕರಣದಲ್ಲಿ ಯುವಕ ಶಿವಮೊಗ್ಗದಲ್ಲಿ ಪತ್ತೆಯಾಗುವುದರೊಂದಿಗೆ ಪ್ರಕರಣ ಕುತೂಹಲಕಾರಿ ತಿರುವು ಪಡೆದಿದೆ.

ಕುರ್ನಾಡು ನಿವಾಸಿ ಪ್ರವೀಣ ಸಫಲ್ಯ(28) ಎಂಬವರ ಬೈಕ್ ಸ್ಥಳದಲ್ಲಿ ಪತ್ತೆಯಾಗಿದ್ದು, ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಪ್ರವೀಣ್ ಇಂದು ಬೆಳಿಗ್ಗೆ ನದಿಗೆ ಜಿಗಿದಿರಬಹುದೆಂಬ ಶಂಕೆ ಸ್ಥಳೀಯವಾಗಿ ವ್ಯಕ್ತವಾಗಿದ್ದು, ನದಿಯಲ್ಲಿ ತೀವೃ ಶೋಧ ಕಾರ್ಯ ನಡೆದಿತ್ತು.

ಪ್ರವೀಣ್ ತಾನು ಶಿವಮೊಗ್ಗದ ಸಂಬಂಧಿಕರ ಮನೆಯಲ್ಲಿ ಇದ್ದೇನೆ ಎಂದು ತಿಳಿಸಿದ್ದಾರೆ ಎಂಬ ಮಾಹಿತಿ ಬಂದಿದೆ.

Get real time updates directly on you device, subscribe now.