ಮಂಗಳೂರು: ಕೊರೋನಾ ಸೋಂಕಿತ ಮಹಿಳೆ ಮೃತ್ಯು

ಮೃತ ಮಹಿಳೆ ಅಧಿಕ ರಕ್ತದೊತ್ತಡ, ಮಧುಮೇಹದಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ.

ಇದರೊಂದಿಗೆ ಜಿಲ್ಲೆಯಲ್ಲಿ ಮೃತಪಟ್ಟ ಕೊರೋನಾ ಸೋಂಕಿತರ  ಸಂಖ್ಯೆ ಹತ್ತಕ್ಕೆ ಏರಿಕೆಯಾಗಿದೆ.

ಕರಾವಳಿ ಕರ್ನಾಟಕ ವರದಿ
ಮಂಗಳೂರು: ಉಳ್ಳಾಲ ಆಝಾದ್‍ನಗರದ ಮಹಿಳೆ(57)ಯೊಬ್ಬರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಮೃತಪಟ್ಟ ಕೊರೋನಾ ಸೋಂಕಿತರ  ಸಂಖ್ಯೆ ಹತ್ತಕ್ಕೆ ಏರಿಕೆಯಾಗಿದೆ.

ಹತ್ತು ದಿನಗಳ ಹಿಂದೆ ಬೇಧಿ ಹಿನ್ನೆಲೆಯಲ್ಲಿ  ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎಂಟು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆ ಬಳಿಕ ಎರಡು ದಿನ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಮಹಿಳೆಯ ಗಂಟಲು ದ್ರವ ಪರೀಕ್ಷಿಸಲಾಗಿತ್ತು. ಪಾಸಿಟಿವ್ ವರದಿ ಬಂದ ಮಹಿಳೆಯನ್ನು ವೆನ್‍ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೃತ ಮಹಿಳೆ ಅಧಿಕ ರಕ್ತದೊತ್ತಡ, ಮಧುಮೇಹದಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ.

Get real time updates directly on you device, subscribe now.