ವಿದ್ಯಾರ್ಥಿಗಳ ಹೆತ್ತವರ ಹೋರಾಟಕ್ಕೆ ಜಯ: ಸಿಬಿಎಸ್‌ಇ ಹತ್ತು, ಹನ್ನೆರಡನೇ ತರಗತಿ ಪರೀಕ್ಷೆ ರದ್ದು

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಬಗ್ಗೆ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಹತ್ತು ಮತ್ತು ಹನ್ನೆರಡನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಎಂದಿದ್ದಾರೆ.

ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿರಿಸಿಕೊಂಡು ಪರೀಕ್ಷೆ ನಡೆಯಲು ಅವಕಾಶ ಕೊಡಕೂಡದು ಎಂದು ಹೆತ್ತವರು ಕೋರ್ಟ್ ಮೆಟ್ಟಿಲೇರಿದ್ದರು.

ಕರಾವಳಿ ಕರ್ನಾಟಕ ವರದಿ
ನವ ದೆಹಲಿ: ಜುಲೈ1ರಿಂದ 15ರ ತನಕ ನಿಗದಿಯಾಗಿದ್ದ ಸಿಬಿಎಸ್‌ಇ ಬೋರ್ಡ್ ಹತ್ತನೇ ತರಗತಿ ಪರೀಕ್ಷೆಗಳನ್ನು ಕೋವಿಡ್19 ಭೀತಿಯ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ ಎಂದು ಸಿಬಿಎಸ್‌ಇ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ದೆಹಲಿ, ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳು ಪರೀಕ್ಷೆಗಳನ್ನು ನಡೆಸಲು ಅಸಮರ್ಥತೆ ವ್ಯಕ್ತಪಡಿಸಿರುವುದರಿಂದ ಅನುಕೂಲಕರ ಪರಿಸ್ಥಿತಿ ನೋಡಿಕೊಂಡು ಪರೀಕ್ಷೆಗಳನ್ನು ನಡೆಸಲಾಗುವುದೆಂದು ತಿಳಿಸಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಬಗ್ಗೆ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಹತ್ತು ಮತ್ತು ಹನ್ನೆರಡನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಎಂದಿದ್ದಾರೆ.

ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿರಿಸಿಕೊಂಡು ಪರೀಕ್ಷೆ ನಡೆಯಲು ಅವಕಾಶ ಕೊಡಕೂಡದು ಎಂದು ಹೆತ್ತವರು ಕೋರ್ಟ್ ಮೆಟ್ಟಿಲೇರಿದ್ದರು.

Get real time updates directly on you device, subscribe now.