‘ಆರ್ಥಿಕತೆ ಹದಗೆಟ್ಟಿದೆ, ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಪ್ರಶ್ನೆಯೇ ಇಲ್ಲ’: ಸಿಎಂ ಯಡಿಯೂರಪ್ಪ

ಕಟ್ಟುನಿಟ್ಟಿನ ಹೋಂ ಕ್ವಾರಂಟೈನ್ ಸೇರಿದಂತೆ ಸೂಕ್ತ ಚಿಕಿತ್ಸೆ ಮತ್ತು ಕೋವಿಡ್ ನಿಯಂತ್ರಣ ಸಂಬಂಧಿ ಮಾರ್ಗಸೂಚಿಗಳ ಅಳವಡಿಕೆಗೆ ಒತ್ತು.

ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಅಬಿವೃದ್ಧಿಯತ್ತ ಗಮನ ಹರಿಸಬೇಕಾಗಿದೆ ಎಂದು ಸಿಎಂ ಹೇಳಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಈ ಕುರಿತ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದ ಸಂದರ್ಭದಲ್ಲಿ ಲಾಕ್‌ಡೌನ್ ಮಾಡುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಕೊರೋನ ತಡೆಗೆ ಜನರ ಸಹಕಾರ ಅಗತ್ಯ. ಸರಕಾರ ಕೊರೋನ ಸೋಂಕು ನಿಯಂತ್ರಣ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಹೇಳಿದರು. ಕಟ್ಟುನಿಟ್ಟಿನ ಹೋಂ ಕ್ವಾರಂಟೈನ್ ಸೇರಿದಂತೆ ಸೂಕ್ತ ಚಿಕಿತ್ಸೆ ಮತ್ತು ಕೋವಿಡ್ ನಿಯಂತ್ರಣ ಸಂಬಂಧಿ ಮಾರ್ಗಸೂಚಿಗಳ ಅಳವಡಿಕೆಗೆ ಒತ್ತು ನೀಡಲಾಗಿದೆ ಎಂದಿದ್ದಾರೆ.

ವಿದಾನಸೌಧದಲ್ಲಿ ಸಚಿವರು, ಶಾಸಕರು, ಸಂಸದರ ಸಭೆ ಸಂದರ್ಭ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಅಬಿವೃದ್ಧಿಯತ್ತ ಗಮನ ಹರಿಸಬೇಕಾಗಿದೆ ಎಂದು ಸಿಎಂ ಹೇಳಿದ್ದಾರೆ.

Get real time updates directly on you device, subscribe now.