ಪಡುಬಿದ್ರೆ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಗೆ ಕೊರೋನ ಸೋಂಕು

ಇತರ ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುವ ಅಗತ್ಯ ಇಲ್ಲ ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಉಡುಪಿ: ಕಾಪು ತಾಲೂಕಿನ ಎಸೆಸೆಲ್ಸಿ ವಿದ್ಯಾರ್ಥಿನಿಯೋರ್ವರಿಗೆ ಕೊರೋನ ಸೋಂಕು ದೃಢಪಟ್ಟಿದೆ.

ಜೂ.27ರಂದು ವಿದ್ಯಾರ್ಥಿನಿಯ ತಂದೆಯ ಗಂಟಲು ದ್ರವ ಪರೀಕ್ಷೆಯಲ್ಲಿ ಕೊರೋನಾ ಸೋಂಕು ದೃಢಪಟ್ಟಿತ್ತು. ಇದೇ ದಿನ ಈಕೆಯ ಗಂಟಲು ದ್ರವ ಮಾದರಿಯನ್ನೂ ಪರೀಕ್ಷಿಸಲಾಗಿತ್ತು.

ಜೂ.25ರ ಕನ್ನಡ ಮತ್ತು ಜೂ.27ರ ಗಣಿತ ಪರೀಕ್ಷೆ ಬರೆದಿದ್ದರು. ಈಕೆ ಜೂ.29ರಂದು ಪರೀಕ್ಷೆ ಬರೆಯುವ ಅವಕಾಶ ವಂಚಿತರಾಗಿದ್ದಾರೆ.

ಪರೀಕ್ಷಾ ಕೇಂದ್ರದಲ್ಲಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದರಿಂದ ಇತರ ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುವ ಅಗತ್ಯ ಇಲ್ಲ ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

Get real time updates directly on you device, subscribe now.