ದ.ಕ: ಕೊರೋನಾ ಸೋಂಕಿತ ಉಳ್ಳಾಲದ ಮಹಿಳೆ ಸಾವು

ಇವರ ನಿಧನದೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿದೆ.

ಕರಾವಳಿ ಕರ್ನಾಟಕ ವರದಿ
ಮಂಗಳೂರು: ಉಳ್ಳಾಲದ ಅರವತ್ತು ವರ್ಷದ ವೃದ್ಧ ಮಹಿಳೆಯೋರ್ವರು ಕೋವಿಡ್ ಸೋಂಕಿತರಾಗಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಮೃತಪಟ್ಟರು.

ಇವರ ನಿಧನದೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿದೆ.

ಉಸಿರಾಟದ ಸಮಸ್ಯೆಯಿಂದ ಮಹಿಳೆ ಬಳಲಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಜಿಲ್ಲಾ ವೈದ್ಯಾಧಿಕಾರಿ ಈ ಬಗ್ಗೆ ಮಾಹಿತಿ ನೀಡಿದರು.

Get real time updates directly on you device, subscribe now.