ಕೊರೋನಾ ಸೋಂಕಿತ ಬೈಂದೂರಿನ ವ್ಯಕ್ತಿ ಸಾವು

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ.

ಮುಂಬೈಯಿಂದ ರವಿವಾರ ಊರಿಗೆ ಬಂದಿದ್ದ ಇವರು ಈ ಮೊದಲು ಮುಂಬೈಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಕರಾವಳಿ ಕರ್ನಾಟಕ ವರದಿ
ಕುಂದಾಪುರ: ನಾಲ್ಕು ದಿನಗಳ ಹಿಂದೆ ಮುಂಬೈಯಿಂದ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಮನೆಗೆ ಬಂದಿದ್ದ ವ್ಯಕ್ತಿಯೋರ್ವರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ.

ರವಿವಾರ ಊರಿಗೆ ಬಂದಿದ್ದ ಇವರು ಈ ಮೊದಲು ಮುಂಬೈಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಮೃತರ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಕೊರೋನಾ ಸೋಂಕು ದೃಢಪಟ್ಟಿತ್ತು. ಇವರೊಂದಿಗೆ ಬಂದ ಪತ್ನಿ ಮತ್ತು ಪುತ್ರಿ ಅವರ ಸ್ವ್ಯಾಬ್ ಟೆಸ್ಟ್ ವರದಿಯಲ್ಲಿ ಕೋವಿಡ್ ಪೊಸಿಟಿವ್ ಆಗಿದ್ದು, ಕುಂದಾಪುರ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಮೃತ ವ್ಯಕ್ತಿ(48ವರ್ಷ) ಮಧುಮೇಹದಿಂದಲೂ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

 

Get real time updates directly on you device, subscribe now.