ತಹಶೀಲ್ದಾರ್ ಕೊಲೆ: ಸಿಎಂ ಬಿಎಸ್‌ವೈ 25ಲಕ್ಷ ರೂ. ಪರಿಹಾರ ಘೋಷಣೆ

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ವಿವಾದಿತ ಭೂಮಿ ಸರ್ವೆಗೆ ಹೋದ ಸಂದರ್ಭ ಕೊಲೆಯಾದ ತಹಶೀಲ್ದಾರರಾದ ಚಂದ್ರಮೌಳೇಶ್ವರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ‌ಎಸ್‌ವೈ ತೀವೃ ವಿಷಾದ ವ್ಯಕ್ತಪಡಿಸಿದ್ದಾರೆ.

ಮೃತರ ಅಂತ್ಯ ಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 25 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಲು ಸೂಚಿಸಲಾಗಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ದೇವರು, ಚಂದ್ರಮೌಳೇಶ್ವರ್ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬಕ್ಕೆ ಆದ ಹಾನಿ ಮತ್ತು ದುಃಖವನ್ನು ಭರಿಸುವ ಶಕ್ತಿಯನ್ನು ಕೊಡಲಿ ಎಂದಿ ಸಿಎಂ ಕಂಬನಿ ಮಿಡಿದಿದ್ದಾರೆ.

ಆರೋಪಿ ವಿರುದ್ಧ ಕಾನೂನಿನ ಅನ್ವಯ ಕ್ರಮಕ್ಕೆ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Get real time updates directly on you device, subscribe now.