ದಕ್ಷಿಣ ಕನ್ನಡ: ಬ್ಯೂಟಿ ಪಾರ್ಲರ್ ಸ್ವಯಂಪ್ರೇರಿತ ಬಂದ್

ಕರಾವಳಿ ಕರ್ನಾಟಕ ವರದಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಬ್ಯೂಟಿಪಾರ್ಲರ್‌ಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲು ನಿರ್ಧರಿಸಲಾಗಿದೆ.

ಜಿಲ್ಲಾ ಬ್ಯೂಟಿಪಾರ್ಲರ್ ಅಸೋಸಿಯೇಷನ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಗ್ರಾಹಕರ ಮತ್ತು ಬ್ಯೂಟಿಪಾರ್ಲರ್ ಸಿಬಂದಿಗಳ ಆರೋಗ್ಯದ ದೃಷ್ಠಿಯಿಂದ ಬ್ಯೂಟಿಪಾರ್ಲರ್‌ಗಳನ್ನು ಬಂದ್ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅನುಕೂಲಕರ ಪರಿಸ್ಥಿತಿಯಲ್ಲಿ ಬ್ಯೂಟಿ ಪಾರ್ಲರ್ ಪುನ: ತೆರೆಯಲು ತೀರ್ಮಾನಿಸಲಾಗುತ್ತದೆ ಎಂದು ಅಸೋಸಿಯೇಷನ್ ಅಧ್ಯಕ್ಷೆ ಬಬಿತಾ ಶೆಟ್ಟಿ ತಿಳಿಸಿದ್ದಾರೆ.

Get real time updates directly on you device, subscribe now.