ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಹಾರ್ದಿಕ್ ಪಟೇಲ್

ಕರಾವಳಿ ಕರ್ನಾಟಕ ವರದಿ
ಅಹ್ಮದಾಬಾದ್: ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಕಾರ್ಯಾಧ್ಯಕ್ಷರಾಗಿ ಪಾಟಿದಾರ್ ನಾಯಕ ಹಾರ್ದಿಕ ಪಟೇಲ್ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ಈ ಕುರಿತು ಕಾಂಗ್ರೆಸ್ ಅಧ್ಯಕ್ಷರು ಅನುಮತಿ ನೀಡಿರುವುದು ಅಧಿಕೃತವಾಗಿದೆ.

ಪಾಟಿದಾರ್ ಸಮುದಾಯಕ್ಕೆ ಸರಕಾರಿ ಉದ್ಯೋಗಗಳಲ್ಲಿ ಮೀಸಲಾತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಮೂಲಕ ಹಾರ್ದಿಕ್ ಪಟೇಲ್ ಖ್ಯಾತರಾಗಿದ್ದರು. ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದರು.

Get real time updates directly on you device, subscribe now.