ದ.ಕ. ಜಿಲ್ಲೆಯಲ್ಲಿ ಲಾಕ್ ಡೌನ್ ನಿರ್ಧಾರ ಆಗಿಲ್ಲ, ಜನರಿಗೆ ತೊಂದರೆ ಆಗುವ ನಿರ್ಧಾರ ಇಲ್ಲ: ಸಚಿವ ಪೂಜಾರಿ

ಲಾಕ್ ಡೌನ್ ವಿಷಯದಲ್ಲಿ ಜನರು ಗೊಂದಲಕ್ಕೀಡಾಗಬಾರದು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರಿಗೆ ತೊಂದರೆಯಾಗುವ ಯಾವುದೇ ನಿರ್ಧಾರ ದಿಢೀರ್ ಜಾರಿಗೆ ತರುವುದಿಲ್ಲ.

ಕರಾವಳಿ ಕರ್ನಾಟಕ ವರದಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರಿಗೆ ತೊಂದರೆಯಾಗುವ ಯಾವುದೇ ನಿರ್ಧಾರ ದಿಢೀರ್ ಜಾರಿಗೆ ತರುವುದಿಲ್ಲ. ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಬಗ್ಗೆ ಅಧ್ಯಯನ ಮಾಡಲು ಇಂದು ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಡಿಸಿ ಜೊತೆ ಸಭೆ ನಡೆಸಲಾಗಿದೆ. ಆದರೆ ಸಭೆಯಲ್ಲಿ ಲಾಕ್ ಡೌನ್ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ ಎಂದು ಸಚಿವ ಪೂಜಾರಿ ಹೇಳಿದ್ದಾರೆ.

ಸೋಮವಾರ ಬೆಳಿಗ್ಗೆ ಮುಖ್ಯಮಂತ್ರಿಗಳೊಂದಿಗೆ ಸಂಸದರು, ಜಿಲ್ಲಾಧಿಕಾರಿಗಳು ಮತ್ತು ತಾನು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದ್ದು, ಆ ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಲಾಕ್ ಡೌನ್ ವಿಷಯದಲ್ಲಿ ಜನರು ಗೊಂದಲಕ್ಕೀಡಾಗಬಾರದು ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Get real time updates directly on you device, subscribe now.