ಐಶ್ವರ್ಯ ರೈ, ಪುತ್ರಿ ಆರಾಧ್ಯಗೆ ಕೊರೋನ ಸೋಂಕು: ಟ್ವೀಟ್ ಡಿಲೀಟ್ ಮಾಡಿದ ಆರೋಗ್ಯ ಸಚಿವ

ಮುಂಬೈ ಮೇಯರ್ ಕಿಶೋರಿ ಪಡ್ನೇಕರ್ ಅವರು ಐಶ್ವರ್ಯ ಮತ್ತು ಅವರ ಪುತ್ರಿ ಇಬ್ಬರ ಕೋವಿಡ್ ವರದಿ ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಮುಂಬೈ: ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯ ಬಚ್ಚನ್‌ಗೆ ಕೋವಿಡ್ ಸೋಂಕು ತಗುಲಿರುವುದು ದೃಢವಾಗಿದೆ.

ಶನಿವಾರ ಅಮಿತಾಬ್ ಬಚ್ಚನ್ ಮತ್ತು ಪುತ್ರ ಅಭಿಷೇಕ್ ಬಚ್ಚನ್‌ಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟ ಬೆನ್ನಲ್ಲೇ ಐಶ್ವರ್ಯ ಮತ್ತು ಆಕೆಯ ಪುತ್ರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.

ಜಯ ಬಚ್ಚನ್ ಅವರ ವರದಿ ನೆಗೆಟಿವ್ ಬಂದಿದೆ.

ಈ ನಡುವೆ ಕೆಲವೇ ನಿಮಿಷಗಳಲ್ಲಿ ಟ್ವೀಟ್ ಡಿಲೀಟ್ ಮಾಡಲಾಗಿದೆ. ಮುಂಬೈ ಮೇಯರ್ ಕಿಶೋರಿ ಪಡ್ನೇಕರ್ ಅವರು ಐಶ್ವರ್ಯ ಮತ್ತು ಅವರ ಪುತ್ರಿ ಇಬ್ಬರ ಕೋವಿಡ್ ವರದಿ ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ.

Get real time updates directly on you device, subscribe now.