ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ, ದ.ಕ. ಜಿಲ್ಲೆಗಳು ಪ್ರಥಮ

ಚಿತ್ರದುರ್ಗ, ರಾಯಚೂರು ಮತ್ತು ವಿಜಯಪುರಗಳು ಕೊನೆಯ ಸ್ಥಾನದಲ್ಲಿವೆ.

ತಲಾ 90.71 ಶೇ. ಫಲಿತಾಂಶ ದಾಖಲಿಸಿರುವ ಉಡುಪಿ ಮತ್ತು ದ.ಕ. ಜಿಲ್ಲೆಗಳು ಫಲಿತಾಂಶದಲ್ಲಿ ಪ್ರಥಮ ಸ್ಥಾನದಲ್ಲಿವೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಇಂದು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.

ತಲಾ 90.71 ಶೇ. ಫಲಿತಾಂಶ ದಾಖಲಿಸಿರುವ ಉಡುಪಿ ಮತ್ತು ದ.ಕ. ಜಿಲ್ಲೆಗಳು ಫಲಿತಾಂಶದಲ್ಲಿ ಪ್ರಥಮ ಸ್ಥಾನದಲ್ಲಿವೆ. ಕೊಡಗು ತೃತೀಯ ಸ್ಥಾನದಲ್ಲಿದೆ.

ಚಿತ್ರದುರ್ಗ, ರಾಯಚೂರು ಮತ್ತು ವಿಜಯಪುರಗಳು ಕೊನೆಯ ಸ್ಥಾನದಲ್ಲಿವೆ.

ಈ ವರ್ಷ ಶೇಕಡಾ 61.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶದಲ್ಲಿ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಎಸ್ ಎಂ ಎಸ್ ಮೂಲಕ ಫಲಿತಾಂಶ ಕಳುಹಿಸಲಾಗಿದೆ. ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

 

 

 

Get real time updates directly on you device, subscribe now.