ಉಡುಪಿ: ಜಿಲ್ಲಾಸ್ಪತ್ರೆ ಸೀಲ್‌ಡೌನ್

ತುರ್ತು ಚಿಕಿತ್ಸೆ ಹೊರತುಪಡಿಸಿ ಸಾಮಾನ್ಯ ರೋಗಿಗಳ ಪ್ರವೇಶ ನಿರ್ಬಂಧಿಸಲಾಗಿದೆ.

ಕರಾವಳಿ ಕರ್ನಾಟಕ ವರದಿ
ಉಡುಪಿ: ಜಿಲ್ಲಾಸ್ಪತ್ರೆಯ ಇಬ್ಬರು ವೈದ್ಯರು, ಓರ್ವ ದಾದಿ ಮತ್ತು ಇಬ್ಬರು ಸಿಬಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ಮೂರು ದಿನ ಸೀಲ್ ಡೌನ್ ಮಾಡಲಾಗಿದೆ.

ತುರ್ತು ಚಿಕಿತ್ಸೆ ಹೊರತುಪಡಿಸಿ ಸಾಮಾನ್ಯ ರೋಗಿಗಳ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್ ಮಾಹಿತಿ ನೀಡಿದ್ದಾರೆ.

ಕೋವಿಡ್ ಸೋಂಕು ದೃಢಪಟ್ಟ ವೈದ್ಯರು ಹೋಂಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

Get real time updates directly on you device, subscribe now.