ಕಾಸರಗೋಡು: ಜು.17ರಿಂದ ಜಿಲ್ಲೆಯಲ್ಲಿ ವಾಹನ ಸಂಚಾರ ನಿರ್ಬಂಧ

ಕರಾವಳಿ ಕರ್ನಾಟಕ ವರದಿ
ಕಾಸರಗೋಡು: ಕೊರೋನಾ ವ್ಯಾಪಿಸುವ ಭೀತಿಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜು.17ರಿಂದ 31ರ ತನಕ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಕೆ.ಎಸ್.ಆರ್.ಟಿ.ಸಿ ಬಸ್, ಖಾಸಗಿ ವಾಹನಗಳಿಗೂ ನಿರ್ಬಂಧ ಅನ್ವಯವಾಗಲಿದೆ.

ವಾಹನಗಳನ್ನು ರಸ್ತೆಗಳಿಗೆ ಇಳಿಸಿದರೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ತಿಳಿಸಿದ್ದಾರೆ.

Get real time updates directly on you device, subscribe now.