ದ.ಕ ಜಿಲ್ಲಾಧಿಕಾರಿ ಸಿಂಧು ರೂಪೇಶ್ ದಿಢೀರ್ ವರ್ಗಾವಣೆ, ನೂತನ ಡಿಸಿಯಾಗಿ ಡಾ. ರಾಜೇಂದ್ರ ನೇಮಕ

ಜಾನುವಾರು ಸಾಗಾಟಗಾರರಿಗೆ ಹಲ್ಲೆಗೈದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ಡಿಸಿ ಸಿಂಧೂ ಅವರಿಗೆ ವ್ಯಕ್ತಿಯೊಬ್ಬ ಕೊಲೆ ಬೆದರಿಕೆಯನ್ನೂ ಒಡ್ಡಿದ್ದ.

ಜಾನುವಾರು ಸಾಗಾಟಗಾರರಿಗೆ ಹಲ್ಲೆ ಮಾಡಿದರೆ ಕಾನೂನು ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಎಚ್ಚರಿಕೆ ನೀಡಿದ ಮರುದಿನವೇ ವರ್ಗಾವಣೆ.

ಕರಾವಳಿ ಕರ್ನಾಟಕ ವರದಿ
ಮಂಗಳೂರು: ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರನ್ನು ತಕ್ಷಣದಿಂದ ಜಾರಿಯಾಗುವಂತೆ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಸಿಂಧೂ ಅವರನ್ನು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವೀಸ್ ನಿರ್ದೇಶಕರಾಗಿ ನಿಯೋಜಿಸಲಾಗಿದೆ.

ನೂತನ ಜಿಲ್ಲಾಧಿಕಾರಿಯಾಗಿ ಬೆಳಗಾವಿ ಪಂಚಾಯತ್ ಸಿಇಒ ಆಗಿದ್ದ ಡಾ. ರಾಜೇಂದ್ರ ಕೆ.ವಿ.ಅವರನ್ನು ನೇಮಕಗೊಳಿಸಲಾಗಿದೆ.

ದ.ಕ ಡಿಸಿ ಸೇರಿದಂತೆ ಹದಿನಾಲ್ಕು ಐಎ‌ಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ಜಾನುವಾರು ಸಾಗಾಟಗಾರರಿಗೆ ಹಲ್ಲೆ/ವಾಹನಕ್ಕೆ ದಾಳಿ ಮಾಡಿದರೆ, ಕಾನೂನು ಕೈಗೆತ್ತಿಕೊಂಡವರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ದ.ಕ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಎಚ್ಚರಿಕೆ ನೀಡಿದ ಮರುದಿನವೇ ಸರಕಾರ ಅವರನ್ನು ವರ್ಗಾವಣೆಗೊಳಿಸಿದೆ ಎಂಬುದು ಗಮನಾರ್ಹ.

 

 

Get real time updates directly on you device, subscribe now.