ಟಿಪ್ಪು ಸುಲ್ತಾನ್, ರಾಣಿ ಅಬ್ಬಕ್ಕ ಪಠ್ಯ ಕಿತ್ತುಹಾಕಿದ ಸರಕಾರದ ವಿರುದ್ಧ ಸಿದ್ದರಾಮಯ್ಯ ಹೋರಾಟದ ಎಚ್ಚರಿಕೆ

ಕರ್ನಾಟಕ ಪಠ್ಯಪುಸ್ತಕ ಸಮಿತಿ ಸರ್ಕಾರಕ್ಕಿಂತಲೂ ಉನ್ನತ ಸಂಸ್ಥೆಯೇ?

ಅಧಿಕೃತ ಸರ್ಕಾರ‌ ದುರ್ಬಲಗೊಳ್ಳುತ್ತಿದೆ,‌ ಅನಧಿಕೃತ ಸಂಘಿ ಸರ್ಕಾರ ಬಲಗೊಳ್ಳುತ್ತಿದೆ ಎಂದು ಸಿದ್ದರಾಮಯ್ಯ ಆಕ್ರೋಶ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಏಸು ಕ್ರಿಸ್ತ, ಪ್ರವಾದಿ ಪೈಗಂಬರ್, ಟಿಪ್ಪುಸುಲ್ತಾನ್, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕದೇವಿ ಮೊದಲಾದವರಿಗೆ ಸಂಬಂಧಿಸಿದ ಪಠ್ಯವನ್ನು ಹತ್ತನೇ ತರಗತಿಯ ಪಠ್ಯಕ್ರಮದಿಂದ ಕೈಬಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ. ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುವ ಈ ಹುನ್ನಾರವನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ನಿಯಂತ್ರಿಸಲಾಗದ ರಾಜ್ಯ ಸರ್ಕಾರ, ಪರಿಸ್ಥಿತಿಯ ದುರ್ಬಳಕೆ ಮಾಡಿಕೊಂಡು ಪಠ್ಯಪುಸ್ತಕಗಳನ್ನು ಕೇಸರೀಕರಣಗೊಳಿಸಿ ತನ್ನ ಗುಪ್ತ ಅಜೆಂಡಾ ಅನುಷ್ಠಾನಗೊಳಿಸಲು ಹೊರಟಿದೆ.‌‌ ಅಧಿಕೃತ ಸರ್ಕಾರ‌ ದುರ್ಬಲಗೊಳ್ಳುತ್ತಿದೆ,‌ ಅನಧಿಕೃತ ಸಂಘಿ ಸರ್ಕಾರ ಬಲಗೊಳ್ಳುತ್ತಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

10ನೇ ತರಗತಿ‌‌ ಪಠ್ಯದಿಂದ ಕೆಲವು ಮಹಾಪುರುಷರಿಗೆ ಸಂಬಂಧಿಸಿದ ಪಾಠವನ್ನು ಕೈಬಿಟ್ಟದ್ದರಲ್ಲಿ ಸರ್ಕಾರದ ಪಾತ್ರವಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಕರ್ನಾಟಕ ಪಠ್ಯಪುಸ್ತಕ ಸಮಿತಿ ಸರ್ಕಾರಕ್ಕಿಂತಲೂ ಉನ್ನತ ಸಂಸ್ಥೆಯೇ? ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

 

Get real time updates directly on you device, subscribe now.