‘ಶಹಬ್ಬಾಸ್, ಯಡಿಯೂರಪ್ಪ ಅವರೇ’ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

‘ಶಹಬ್ಬಾಸ್, ಯಡಿಯೂರಪ್ಪ ಅವರೇ, ಒಂದೆಡೆ ಕೊರೊನಾ ವಾರಿಯರ್ಸ್ಗೆ ಆಕಾಶದಿಂದ ಹೂಮಳೆ ಸುರಿಸುತ್ತೀರಿ, ಇನ್ನೊಂದೆಡೆ….

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ‘ಶಹಬ್ಬಾಸ್, ಯಡಿಯೂರಪ್ಪ ಅವರೇ’ ಎಂದಿದ್ದಾರೆ. ‘ಶಹಬ್ಬಾಸ್, ಯಡಿಯೂರಪ್ಪ’ ಎಂದಿದ್ದು ಯಡಿಯೂರಪ್ಪ ಆವರನ್ನು ಹೊಗಳಿ ಅಟ್ಟಕ್ಕೇರಿಸಲಿಕ್ಕಲ್ಲ.

‘ಶಹಬ್ಬಾಸ್, ಯಡಿಯೂರಪ್ಪ ಅವರೇ, ಒಂದೆಡೆ ಕೊರೊನಾ ವಾರಿಯರ್ಸ್‌ಗೆ ಆಕಾಶದಿಂದ ಹೂಮಳೆ ಸುರಿಸುತ್ತೀರಿ, ಇನ್ನೊಂದೆಡೆ ಕೊಲೆ ಬೆದರಿಕೆ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ರಕ್ಷಣೆ ನೀಡದೆ ವರ್ಗಾವಣೆ ಮಾಡ್ತೀರಿ. ಇದೇನಾ ಕೊರೊನಾ ವಾರಿಯರ್ಸ್‌ಗೆ ಕೊಡುವ ಗೌರವ? ಎಂದು ಜಾನುವಾರು ಸಾಗಾಟಗಾರರಿಗೆ ಹಲ್ಲೆಗೈದವರಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಮರುದಿನವೇ ವರ್ಗಾವಣೆಗೊಂಡ ದ. ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವರ್ಗಾವಣೆಗೆ ಸಂಬಂಧಿಸಿ ಮಾಜಿ ಸಿಎಂ ಕಿಡಿಕಾರಿದ್ದಾರೆ.

ಕೊರೊನಾ ಅಕ್ರಮ ಬಯಲಿಗೆಳೆದರೆ ಅಧಿಕಾರಿಗಳ ನೈತಿಕಸ್ಥೈರ್ಯ ಕುಸಿಯುವಂತೆ ಮಾಡ್ತೀರಿ ಎಂದು ದೂರುತ್ತೀರಿ. ಮೊದಲು, ಭ್ರಷ್ಟರ ರಕ್ಷಣೆಗಾಗಿ ಬಿಬಿಎಂಪಿ‌ ಆಯುಕ್ತರ ವರ್ಗಾವಣೆ ಮಾಡಿದ್ದೀರಿ, ಈಗ ಕೋಮುವಾದಿ ಪುಂಡರ ರಕ್ಷಿಸಲು ದ.ಕ. ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿದ್ದೀರಿ. ಇದೇನಾ ನಿಮ್ಮ ಕೊರೊನಾ ವಿರುದ್ಧದ ಹೋರಾಟ? ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Get real time updates directly on you device, subscribe now.