ಉಡುಪಿ: ‘ಕಾನೂನು ಕೈಗೆತ್ತಿಕೊಳ್ಳುವವರ ಮೇಲೆ ಕ್ರಮ’ ಹೇಳಿಕೆ ಹಿಂಪಡೆದ ಅಧಿಕಾರಿಗಳು

ಜಿಲ್ಲಾಧಿಕಾರಿ ಜಗದೀಶ್ ಅವರು ತಾನು ಆ ರೀತಿ ಹೇಳಿಕೆ ನೀಡಿರಲಿಲ್ಲ. ಅಧಿಕಾರಿಗಳ ಕಣ್ತಪ್ಪಿನಿಂದ ಹೀಗಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

‘ಜಾನುವಾರು ಸಾಗಿಸುವವರ ವಿರುದ್ಧ ಕಾನೂನು ಕೈಗೆತ್ತಿಕೊಂಡರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಉಡುಪಿ ಡಿಸಿ ಹೇಳಿದ್ದಾರೆ ಎಂಬ ಹೇಳಿಕೆಯನ್ನು ಕೂಡಲೇ ಹಿಂಪಡೆಯಲಾಗಿದೆ.

ಕರಾವಳಿ ಕರ್ನಾಟಕ ವರದಿ
ಉಡುಪಿ: ‘ಜಾನುವಾರು ಸಾಗಿಸುವವರ ವಿರುದ್ಧ ಕಾನೂನು ಕೈಗೆತ್ತಿಕೊಂಡರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಉಡುಪಿ ಡಿಸಿ ಹೇಳಿದ್ದಾರೆ ಎಂಬ ಹೇಳಿಕೆಯನ್ನು ಕೂಡಲೇ ಹಿಂಪಡೆಯಲಾಗಿದೆ ಎಂದು ಉಡುಪಿ ನಗರಸಭೆ ಪೌರಾಯುಕ್ತ ಆನಂದ ಕಲ್ಲೋಳಿಕರ್ ಅವರು ಸ್ಪಷ್ಟನೆ ನೀಡಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಹೀಗೆ ಹೇಳಿದ್ದಾರೆ ಎಂಬ ವರದಿಯನ್ನು ಅಧಿಕಾರಿಗಳ ಕಣ್ತಪ್ಪಿನಿಂದ ಪತ್ರಿಕೆಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಆನ್ಲೈನ್ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡಿರುವುದು ಜಿಲ್ಲಾಧಿಕಾರಿಗಳ ಗಮನಕ್ಕೆ ಬಂದಿದ್ದು, ಕೂಡಲೇ ಈ ಹೇಳಿಕೆಯನ್ನು ಹಿಂಪಡೆಯಲಾಗಿದೆ.

ಜಿಲ್ಲಾಧಿಕಾರಿ ಜಗದೀಶ್ ಅವರು ತಾನು ಆ ರೀತಿ ಹೇಳಿಕೆ ನೀಡಿರಲಿಲ್ಲ. ಅಧಿಕಾರಿಗಳ ಕಣ್ತಪ್ಪಿನಿಂದ ಹೀಗಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

Get real time updates directly on you device, subscribe now.