ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕ

ಭಾಸ್ಕರ್ ರಾವ್ ಅವರನ್ನು ರಾಜ್ಯ ಸರ್ಕಾರ ಇಂದು ದಿಢೀರ್ ವರ್ಗಾಯಿಸಿ ಆದೇಶ.

ಲಾಕ್‌ಡೌನ್ ಅವಧಿಯಲ್ಲಿ ಭಾಸ್ಕರ್ ರಾವ್ ಚರ್ಚ್ ಒಂದರ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿಡಿಯೋ ವೈರಲ್ ಆದ ಬಳಿಕ ಅವರ ವರ್ಗಾವಣೆಗೆ ಒತ್ತಡ ಹೆಚ್ಚಿತ್ತು ಎನ್ನಲಾಗಿದೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ರಾಜ್ಯ ಸರ್ಕಾರ ಇಂದು ದಿಢೀರ್ ವರ್ಗಾಯಿಸಿ ಆದೇಶ ಹೊರಡಿಸಿದೆ. ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಕಮಲ್ ಪಂತ್ ಅವರನ್ನು ನೇಮಕ ಮಾಡಲಾಗಿದೆ.

ಗುಪ್ತಚರ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕರಾಗಿದ್ದ ಕಮಲ್ ಪಂತ್ ಅವರನ್ನು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ವರ್ಗಾಯಿಸಲಾಗಿದೆ.

ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ. ಎಡಿಜಿಪಿ ಬಿ. ದಯಾನಂದ ಅವರನ್ನು ಗುಪ್ತದಳಕ್ಕೆ ವರ್ಗಾಯಿಸಲಾಗಿದೆ.

ಲಾಕ್‌ಡೌನ್ ಅವಧಿಯಲ್ಲಿ ಭಾಸ್ಕರ್ ರಾವ್ ಚರ್ಚ್ ಒಂದರ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿಡಿಯೋ ವೈರಲ್ ಆದ ಬಳಿಕ ಅವರ ವರ್ಗಾವಣೆಗೆ ಒತ್ತಡ ಹೆಚ್ಚಿತ್ತು ಎನ್ನಲಾಗಿದೆ.

Get real time updates directly on you device, subscribe now.