ಸಿಎಂ ಪುತ್ರ ವಿಜಯೇಂದ್ರ, ಶೋಭಾ ಕರಂದ್ಲಾಜೆಗೆ ಬಿಜೆಪಿ ಉಪಾಧ್ಯಕ್ಷ ಸ್ಥಾನ

ಪಕ್ಷ ಸಂಘಟನೆ, ವಯಸ್ಸು, ಅನುಭವದ ಆಧಾರದಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಸಲಾಗಿದೆ ಎನ್ನಲಾಗಿದೆ.

ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು ಹತ್ತು ಮಂದಿ ರಾಜ್ಯ ಉಪಾಧ್ಯಕ್ಷರಾಗಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕವಾಗಿದ್ದು, ಸಂಸದೆ ಶೋಭಾ ಕರಂದ್ಲಾಜೆ ಮತ್ತು ಸಿಎಂ ಬಿಎಸ್‌ವೈ ಮಗ ಬಿ. ವೈ ವಿಜಯೇಂದ್ರ ಉಪಾಧ್ಯಕ್ಷ ಸ್ಥಾನಕ್ಕೆ ಭಡ್ತಿ ಹೊಂದಿದ್ದಾರೆ.

ತೇಜಸ್ವಿನಿ ಅನಂತಕುಮಾರ್, ನಿರ್ಮಲ್ ಕುಮಾರ್ ಸುರಾನ ಉಪಾಧ್ಯಕ್ಷರಾಗಿ ಮುಂದುವರೆದಿದ್ದು, ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು ಹತ್ತು ಮಂದಿ ರಾಜ್ಯ ಉಪಾಧ್ಯಕ್ಷರಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿ ಎನ್. ರವಿಕುಮಾರ್, ಮಹೇಶ್ ಮುಂದುವರೆದಿದ್ದಾರೆ. ಪರಿಷತ್ ಮಾಜಿ ಸದಸ್ಯ ಅಶ್ವಥ ನಾರಾಯಣ ಮತ್ತು ಸಿದ್ದರಾಜು ಅವರಿಗೆ ಅವಕಾಶ ಕಲ್ಪಿಸಲಾಗಿದೆ.

ಪಕ್ಷ ಸಂಘಟನೆ, ವಯಸ್ಸು, ಅನುಭವದ ಆಧಾರದಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಸಲಾಗಿದೆ ಎನ್ನಲಾಗಿದೆ.

Get real time updates directly on you device, subscribe now.