ರಾಜ್ಯ ಬಿಜೆಪಿ ವಕ್ತಾರರಾಗಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇಮಕ ಮಾಡಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಮಂಗಳೂರು: ಬಿಜೆಪಿ ರಾಜ್ಯ ವಕ್ತಾರರಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರನ್ನು ನೇಮಕ ಮಾಡಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇಮಕ ಮಾಡಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಅವರು ಗಣೇಶ್ ಕಾರ್ಣಿಕ್ ಅವರನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ.

ಗಣೇಶ್ ಕಾರ್ಣಿಕ್ ಅವರು ಶಿಕ್ಷಕರ ಕ್ಷೇತ್ರದಿಂದ ಪರಿಷತ್ ಸದಸ್ಯರಾಗಿದ್ದರು. ಇತ್ತೀಚೆಗೆ ಗಲ್ಫ್‌ನಲ್ಲಿ ಲಾಕ್‌ಡೌನ್ ‌ನಿಂದ ಸಂತ್ರಸ್ತರಾಗಿರುವ ಕರಾವಳಿ ಕನ್ನಡಿಗರನ್ನು ಊರಿಗೆ ಕರೆತರಲು ಪ್ರಯತ್ನಿಸುವ ಮೂಲಕ ಗಮನ ಸೆಳೆದಿದ್ದರು.

 

 

Get real time updates directly on you device, subscribe now.