ಗೃಹಸಚಿವ ಅಮಿತ್ ಷಾಗೆ ಕೊರೋನಾ ಸೋಂಕು

ನನ್ನ ಸಂಪರ್ಕಕ್ಕೆ ಬಂದಿರುವವರೆಲ್ಲರೂ ಸ್ವಯಂ ಐಸೋಲೇಷನ್‌ಗೆ ಒಳಗಾಗಿ ತಮ್ಮ ಆರೋಗ್ಯ ತಪಾಸಣೆ ಮಾಡಿಕೊಳ್ಳಿ ಎಂದಿದ್ದಾರೆ.

ಕರಾವಳಿ ಕರ್ನಾಟಕ ವರದಿ
ನವ ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಕೊರೋನಾ ಸೋಂಕು ತಗುಲಿದೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.

ಕೊರೋನಾದ ಆರಂಭಿಕ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ತಪಾಸಣೆ ಮಾಡಿಸಿದ್ದೆ. ಕೊರೋನಾ ಸೋಂಕು ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೆಲ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರೆಲ್ಲರೂ ಸ್ವಯಂ ಐಸೋಲೇಷನ್‌ಗೆ ಒಳಗಾಗಿ ತಮ್ಮ ಆರೋಗ್ಯ ತಪಾಸಣೆ ಮಾಡಿಕೊಳ್ಳಿ ಎಂದಿದ್ದಾರೆ.

Get real time updates directly on you device, subscribe now.