ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೊರೋನಾ

ಸಿದ್ದರಾಮಯ್ಯ ಅವರು ಮೂತ್ರದ ಸೋಂಕು ಮತ್ತು ಜ್ವರದಿಂದ ಬಳಲುತ್ತಿದ್ದಾರೆ.

ಕೊರೋನಾ ಸೋಂಕಿತರಾದ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಮಣಿಪಾಲ್ ಆಸ್ಪತ್ರೆಯಲ್ಲೇ ಇದ್ದಾರೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊರೋನಾ ಸೋಂಕಿತರಾದ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ರಾತ್ರಿ 11:30ಗೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಿದ್ದರಾಮಯ್ಯ ಅವರು ಮೂತ್ರದ ಸೋಂಕು ಮತ್ತು ಜ್ವರದಿಂದ ಬಳಲುತ್ತಿದ್ದಾರೆ.

ಆತಂಕಕ್ಕೆ ಕಾರಣ ಇಲ್ಲ. ನನ್ನ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೊರೋನಾ ಸೋಂಕಿತರಾದ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಮಣಿಪಾಲ್ ಆಸ್ಪತ್ರೆಯಲ್ಲೇ ಇದ್ದಾರೆ.

“ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. Corona antigen test ಮಾಡಲಾಗಿ ಅವರಿಗೆ ಕೊರೋನ ಸೋಂಕು ತಗುಲಿರುವುದು ಧೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು quarantine ಆಗಬೇಕೆಂದು ಕೇಳಿಕೊಳ್ಳುತ್ತೇನೆ.” ಎಂದು ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Get real time updates directly on you device, subscribe now.