ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೋನಾ ಸೋಂಕು

'ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ'

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತನ್ನ ಇಲಾಖೆ ಸೇರಿದಂತೆ ಹಲವು ಇಲಾಖೆಗಳು ಜೀವದ ಹಂಗು ತೊರೆದು ಕೊರೋನಾ ವಿರುದ್ಧ ಹಗಲಿರುಳು ಶ್ರಮಿಸುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೋನ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತನ್ನ ಇಲಾಖೆ ಸೇರಿದಂತೆ ಹಲವು ಇಲಾಖೆಗಳು ಜೀವದ ಹಂಗು ತೊರೆದು ಕೊರೋನಾ ವಿರುದ್ಧ ಹಗಲಿರುಳು ಶ್ರಮಿಸುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

ಕೊರೊನ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ. ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದು ಸರಣಿ ಟ್ವೀಟ್ ಮೂಲಕ ಹೇಳಿದ್ದಾರೆ.

Get real time updates directly on you device, subscribe now.