ಜಗತ್ತಿನ ಮೊದಲ ಕೋವಿಡ್19 ಲಸಿಕೆಗೆ ರಷ್ಯಾ ಅನುಮೋದನೆ

ಲಸಿಕೆಯನ್ನು ತನ್ನ ಓರ್ವ ಪುತ್ರಿಗೆ ನೀಡಿದ್ದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಲಸಿಕೆಯನ್ನು ಬೃಹತ್ ಪ್ರಮಾಣದಲ್ಲಿ ಉತ್ಪಾದಿಸಲು ಆರಂಭಿಸಲಾಗುತ್ತದೆ. ಅಕ್ಟೋಬರ್‌ನಲ್ಲಿ ಸಾರ್ವತ್ರಿಕ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ.

ಕರಾವಳಿ ಕರ್ನಾಟಕ ವರದಿ
ಮಾಸ್ಕೊ: ದೇಶದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಕೊರೊನಾ ವೈರಸ್ ಲಸಿಕೆಯನ್ನು ಬಳಕೆಗೆ ನೊಂದಾಯಿಸಲಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ರಷ್ಯಾದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಕೋವಿಡ್19 ಲಸಿಕೆ ಜನರ ಬಳಕೆಗೆ ಬಿಡುಗಡೆಯಾಗಲಿದ್ದು, ಆರೋಗ್ಯಸಚಿವಾಲಯ ಅಗತ್ಯವಿರುವ ಅನುಮೋದನೆ ನೀಡಿದೆ.

ಮಾಸ್ಕೊದ ಗಮೆಲಿಯಾ ಸಂಶೋಧನಾ ಸಂಸ್ಥೆ ಮತ್ತು ರಷ್ಯಾದ ರಕ್ಷಣಾ ಸಚಿವಾಲಯ ಜಂಟಿಯಾಗಿ ಲಸಿಕೆಯನ್ನು ಅಭಿವೃದ್ಧಿ ಪಡಿಸಿದೆ.

ಸೆಪ್ಟೆಂಬರ್‌ನಲ್ಲಿ ಲಸಿಕೆಯನ್ನು ಬೃಹತ್ ಪ್ರಮಾಣದಲ್ಲಿ ಉತ್ಪಾದಿಸಲು ಆರಂಭಿಸಲಾಗುತ್ತದೆ. ಅಕ್ಟೋಬರ್‌ನಲ್ಲಿ ಸಾರ್ವತ್ರಿಕ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಅಧ್ಯಕ್ಷ ಪುಟಿನ್ ತಿಳಿಸಿದರು. ಲಸಿಕೆಯನ್ನು ತನ್ನ ಓರ್ವ ಪುತ್ರಿಗೆ ನೀಡಿದ್ದಾಗಿ ತಿಳಿಸಿದರು.

Get real time updates directly on you device, subscribe now.