ನಳಿನ್ ಕಟೀಲ್ ಅವರೆ, ನೀವೊಬ್ಬ ಹಿಂದುವಾದರೆ, ಅಖಂಡ ಶ್ರೀನಿವಾಸಮೂರ್ತಿ ಯಾಕೆ ಹಿಂದು ಆಗದೆ ದಲಿತ ಆಗಿಬಿಟ್ಟರು?

ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ, ನಾವು ಕಟ್ಟುವವರ ಪರ, ಕೆಡವುವವರ ಪರ ಅಲ್ಲ.

ಹಿಂದುತ್ವದ ಸರಿಯಾದ ವ್ಯಾಖ್ಯಾನ ಏನೆಂದು ನಿಮ್ಮ ಹಿರಿಯರಿಂದ ಕೇಳಿ ತಿಳಿದುಕೊಂಡು ಸ್ಪಷ್ಟಪಡಿಸುವಿರಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಮುಂದಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆಶಿ ದಲಿತ ಪರವೊ ಇಲ್ಲ ಭಯೋತ್ಪಾದಕರ ಪರವೋ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೇಳಿದ್ದ ಪ್ರಶ್ನೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

@nalinkateel ಅವರೇ, ನಾವು ಮನುಷ್ಯರ ಪರ, ಮನುಷ್ಯ ವಿರೋಧಿಗಳ ಪರ ಅಲ್ಲ, ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ, ನಾವು ಕಟ್ಟುವವರ ಪರ, ಕೆಡವುವವರ ಪರ ಅಲ್ಲ. ನಮ್ಮನ್ನು ಮತ್ತು ನಿಮ್ಮನ್ನು ಇದಕ್ಕಿಂತ ಚೆನ್ನಾಗಿ ಹೇಗೆ ಪರಿಚಯಿಸಲಿ ಹೇಳಿ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಳಿನ್ ಕಟೀಲ್ ಅವರೇ, ‘ನೀವೊಬ್ಬ ಹಿಂದುವಾದರೆ, ಅಖಂಡ ಶ್ರೀನಿವಾಸಮೂರ್ತಿ ಯಾಕೆ ಹಿಂದು ಅಲ್ಲ?’ ಅವರು ಯಾಕೆ ಹಿಂದು ಆಗದೆ ಕೇವಲ ದಲಿತ ಆಗಿಬಿಟ್ಟರು? ಹಿಂದುತ್ವದ ಸರಿಯಾದ ವ್ಯಾಖ್ಯಾನ ಏನೆಂದು ನಿಮ್ಮ ಹಿರಿಯರಿಂದ ಕೇಳಿ ತಿಳಿದುಕೊಂಡು ಸ್ಪಷ್ಟಪಡಿಸುವಿರಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Get real time updates directly on you device, subscribe now.