ಸಹಕಾರಿ ಬ್ಯಾಂಕ್‌ಗಳು ಆರ್‌ಬಿಐ ವ್ಯಾಪ್ತಿಗೆ: ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

ಸಹಕಾರಿ ಬ್ಯಾಂಕ್‌ಗಳಲ್ಲಿ ಅವ್ಯವಹಾರಗಳು ಬೆಳಕಿಗೆ ಬಂದ ಸಂದರ್ಭ ಗ್ರಾಹಕರ ಹಿತವನ್ನು ಸರ್ಕಾರ ಕಾಪಾಡಬೇಕು ಎಂಬ ಆಗ್ರಹ ಕೇಳಿಬಂದಿತ್ತು.

ದೇಶದ 1,482 ನಗರ ಸಹಕಾರಿ ಬ್ಯಾಂಕ್‌ಗಳು ಮತ್ತು 58 ಬಹು ರಾಜ್ಯ ಸಹಕಾರಿ ಬ್ಯಾಂಕ್‌ಗಳು ಇನ್ನು ಮುಂದೆ ಆರ್‌ಬಿಐ ಮೇಲ್ವಿಚಾರಣೆಗೆ ಬರಲಿವೆ.

ಕರಾವಳಿ ಕರ್ನಾಟಕ ವರದಿ
ನವದೆಹಲಿ: ದೇಶದ ಸಹಕಾರಿ ಬ್ಯಾಂಕುಗಳನ್ನು ಆರ್‌ಬಿಐ ವ್ಯಾಪ್ತಿಗೆ ತರುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್  ಶನಿವಾರ ಅಂಕಿತ ಹಾಕಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ 1,540 ಸಹಕಾರಿ ಬ್ಯಾಂಕ್‌ಗಳನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಸುಪರ್ದಿಗೆ ತಂದು ಕೇಂದ್ರ ಸರಕಾರ ಬುಧವಾರ ಆದೇಶ ಹೊರಡಿಸಿತ್ತು.

ಈ ಮೂಲಕ ದೇಶದ 1,482 ನಗರ ಸಹಕಾರಿ ಬ್ಯಾಂಕ್‌ಗಳು ಮತ್ತು 58 ಬಹು ರಾಜ್ಯ ಸಹಕಾರಿ ಬ್ಯಾಂಕ್‌ಗಳು ಇನ್ನು ಮುಂದೆ ಆರ್‌ಬಿಐ ಮೇಲ್ವಿಚಾರಣೆಗೆ ಬರಲಿವೆ.

ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್‌ಬಿಐ ಅಡಿಯಲ್ಲಿ ಸಹಕಾರಿ ಬ್ಯಾಂಕುಗಳು ತರಲಾಗುವುದು ಎಂದು ತಿಳಿಸಿದ್ದರು.  ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಮಸೂದೆ – 2020 ಈ ವರ್ಷದ ಬಜೆಟ್‌ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ಮುಂದಾಗಿತ್ತು. ಆದರೆ, ಕೋವಿಡ್‌ 19ನಿಂದಾಗಿ ಅಧಿವೇಶನ ಮುಂದೂಡಿದ್ದರಿಂದ ಮಸೂದೆ ಪಾಸ್‌ ಆಗಿರಲಿಲ್ಲ.

ಸಹಕಾರಿ ಬ್ಯಾಂಕ್‌ಗಳಲ್ಲಿ ಅವ್ಯವಹಾರಗಳು ಬೆಳಕಿಗೆ ಬಂದ ಸಂದರ್ಭ ಗ್ರಾಹಕರ ಹಿತವನ್ನು ಸರ್ಕಾರ ಕಾಪಾಡಬೇಕು ಎಂಬ ಆಗ್ರಹ ಕೇಳಿಬಂದಿತ್ತು.

 

 

Get real time updates directly on you device, subscribe now.