ಜುಲೈ 31ರವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ವಿಸ್ತರಣೆ

‘ವಂದೇ ಭಾರತ್ ಮಿಷನ್’ ಅನ್ವಯ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ವಿಮಾನಗಳ ಹಾರಾಟಕ್ಕೆ ಅನುಮತಿ ಇದೆ.

ಕರಾವಳಿ ಕರ್ನಾಟಕ ವರದಿ
ನವದೆಹಲಿ: ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧ ಜುಲೈ 31ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.

ಮೇ 25ರಿಂದ ದೇಶಿಯ ವಿಮಾನ ಹಾರಾಟ ಆರಂಭವಾಗಿದ್ದರೂ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರೆಸಲಾಗಿದೆ.

ಮೂರು ತಿಂಗಳಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದೆ.

‘ವಂದೇ ಭಾರತ್ ಮಿಷನ್’ ಅನ್ವಯ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ವಿಮಾನಗಳ ಹಾರಾಟಕ್ಕೆ ಅನುಮತಿ ಇದೆ.

Get real time updates directly on you device, subscribe now.