ಕಟೀಲು ಅಸ್ರಣ್ಣ ಕುಟುಂಬದ ಅವಹೇಳನ: ಮೂವರ ವಿರುದ್ಧ ಕೋಟಿ ರೂ. ಮಾನನಷ್ಟ ಮೊಕದ್ದಮೆ
ಸಾಮಾಜಿಕ ಜಾಲತಾಣದಲ್ಲಿ ಅಸ್ರಣ್ಣರ ಬಗ್ಗೆ ಅವಹೇಳನಕಾರಿಯಾಗಿ ಬಿಂಬಿಸದಂತೆ ಮೂರನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಕರಾವಳಿ ಕರ್ನಾಟಕ ವರದಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ಕ್ಷೇತ್ರದ ಅಸ್ರಣ್ಣ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಗೈಯಲಾಗುತ್ತಿದೆ ಎಂದು ಆರೋಪಿಸಿ ಮೂವರ ವಿರುದ್ಧ ಕಟೀಲು ಅರ್ಚಕರು ಒಂದು ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಅಸ್ರಣ್ಣರ ಬಗ್ಗೆ ಅವಹೇಳನಕಾರಿಯಾಗಿ ಬಿಂಬಿಸದಂತೆ ಮೂರನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ವಸಂತ, ಅನಂತ, ಸಂಜೀವ ಎಂಬವರ ವಿರುದ್ಧ ಕಟೀಲು ಕೆ. ವಾಸುದೇವ ಅಸ್ರಣ್ಣ, ವೆಂಕಟರಮಣ ಅಸ್ರಣ್ಣ, ಶ್ರೀದೇವಿ ಕುಮಾರ್ ಅಸ್ರಣ್ಣ, ಶ್ರೀನಿವಾಸ ಅಸ್ರಣ್ಣ, ಲಕ್ಷ್ಮೀನಾರಾಯಣ ಅಸ್ರಣ್ಣ, ಗೋಪಾಲಕೃಷ್ಣ ಅಸ್ರಣ್ಣ ಒಂದು ಕೋಟಿ ರೂ. ಮಾನನಷ್ಟ ಮೊಕದ್ದಮೆ ಮತ್ತು ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದರು ಎಂದು ನ್ಯಾಯವಾದಿ ಚಿದಾನಂದ ಕೆದಿಲಾಯ ತಿಳಿಸಿದ್ದಾರೆ.