ಪುತ್ತೂರು: ಗೇರು ಬೀಜ ಗಂಟಲಲ್ಲಿ ಸಿಲುಕಿ ಮಗು ಸಾವು

ಮೂರುವರೆ ವರ್ಷದ ಮಗು ಮೃತಪಟ್ಟ ಘಟನೆ.

ಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಅಷ್ಟರಲ್ಲೇ ಬಾಲಕ ಮೃತಪಟ್ಟಿದ್ದ ಎನ್ನಲಾಗಿದೆ.

ಕರಾವಳಿ ಕರ್ನಾಟಕ ವರದಿ
ಪುತ್ತೂರು: ಗೇರು ಬೀಜ ತಿನ್ನುವ ಸಂದರ್ಭ ಗಂಟಲಲ್ಲಿ ಸಿಲುಕಿ ಮೂರುವರೆ ವರ್ಷದ ಮಗು ಮೃತಪಟ್ಟ ಘಟನೆ ಸಾಲ್ಮರ ಊರಮಾಲ್ ಎಂಬಲ್ಲಿ ನಡೆದಿದೆ.

ಸಾಲ್ಮರದ ಇಸಾಕ್ ಎಂಬವರ ಮಗ ಮೃತಪಟ್ಟಿದ್ದಾನೆ. ಬಾಲಕನನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಅಷ್ಟರಲ್ಲೇ ಬಾಲಕ ಮೃತಪಟ್ಟಿದ್ದ ಎನ್ನಲಾಗಿದೆ.

ಸಾಲ್ಮರ ಸಯ್ಯದ್ ಮಲೆ ಮಸೀದಿ ದಫನ ಭೂಮಿಯಲ್ಲಿ ದಫನ ಕಾರ್ಯ ನಡೆಯಿತು.

Get real time updates directly on you device, subscribe now.