ಏಕೋಪಾಧ್ಯಾಯ ಶಾಲೆಗಳ ವಿಲೀನ: 3,450 ಶಾಲೆಗಳು ಬಂದ್?

ಏಕೋಪಾಧ್ಯಾಯ ಶಾಲೆಗಳನ್ನು ಸಮೀಪದ ಶಾಲೆಯೊಂದಿಗೆ ವಿಲೀನಗೊಳಿಸುವ ಬಗ್ಗೆ ಚಿಂತನೆ

Primary and Secondary Education Minister N. Mahesh courted controversy by proposing to “merge” 3,540 government primary schools that has a single teacher.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಹತ್ತಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಮಕ್ಕಳಿರುವ 3,450 ಏಕೋಪಾಧ್ಯಾಯ ಶಾಲೆಗಳನ್ನು ಸಮೀಪದ ಶಾಲೆಯೊಂದಿಗೆ ವಿಲೀನಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್. ಮಹೇಶ್ ಹೇಳಿದ್ದಾರೆ. ಶಾಲೆಯ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಒದಗಿಸುವ ಉದ್ದೇಶದಿಂದ ಸಮೀಪದ ಶಾಲೆಯೊಂದಿಗೆ ವಿಲೀನಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಯಾವುದೇ ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ ಎಂದರು.

ಕೆ.ಆರ್.ವೃತ್ತದಲ್ಲಿ ಸರ್ವಶಿಕ್ಷಾ ಅಭಿಯಾನದ ಸಭಾಂಗಣದಲ್ಲಿ ಇಲಾಖೆ ಅಧಿಕಾರಿಗಳೊಂದಿಗೆ ಅವರು ಸಮಾಲೋಚನಾ ಸಭೆ ನಡೆಸಿದರು.

ಏಕೋಪಾಧ್ಯಾಯ ಶಾಲೆಯ ಬದಲಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ನಾಲ್ಕೈದು ಶಾಲೆಗಳನ್ನು ಒಗ್ಗೂಡಿಸಿ, ಎಲ್ಲ ಸೌಲಭ್ಯ ಒದಗಿಸಲಾಗುತ್ತದೆ. ಶಾಲೆಗೆ ಮಕ್ಕಳನ್ನು ಕರೆದೊಯ್ಯಲು ಬೇಕಾದ ವಾಹನ ವ್ಯವಸ್ಥೆಯನ್ನು ಇಲಾಖೆಯಿಂದ ಮಾಡುವ ಬಗ್ಗೆಯೂ ಯೋಚಿಸುತ್ತಿದ್ದೇವೆ. ಏಕೋಪಾಧ್ಯಾಯ ಶಾಲೆಗಿಂತ ಎಲ್ಲ ಸೌಲಭ್ಯ ಇರುವ ಶಾಲೆಗಳಲ್ಲಿ ಮಕ್ಕಳಿಗೆ ಪರಿಣಾಮಕಾರಿ ಶಿಕ್ಷಣ ನೀಡಬಹುದು. ಸುಮಾರು 30 ಸಾವಿರ ಮಕ್ಕಳನ್ನು ಸ್ಥಳಾಂತರಿಸಬೇಕಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ 21,225 ಪ್ರಾಥಮಿಕ ಶಾಲೆ, 22,487 ಹಿರಿಯ ಪ್ರಾಥಮಿಕ ಸೇರಿ 43,712 ಸರ್ಕಾರಿ ಶಾಲೆಗಳಿವೆ. ಪ್ರಾಥಮಿಕ ವಿಭಾಗದಲ್ಲಿ 3,372 ಹಾಗೂ ಹಿರಿಯ ಪ್ರಾಥಮಿಕ ವಿಭಾಗದಲ್ಲಿ 78 ಸೇರಿ 3,450 ಏಕೋಪಾಧ್ಯಾಯ ಶಾಲೆಗಳಿವೆ.

Get real time updates directly on you device, subscribe now.